ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ

|
Google Oneindia Kannada News

Recommended Video

Siddaganga Swamiji : ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ..! | Oneindia Kannada

ತುಮಕೂರು, ಜನವರಿ 21: ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು ಅವರು ಗುಣಮುಖರಾಗಲಿ ಎಂದು ರಾಜ್ಯಾದ್ಯಂತ ಅವರ ಸಹಸ್ರಾರು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಸಿದ್ದಗಂಗಾ ಮಠದ ಬಳಿ ತುರ್ತಾಗಿ ಹತ್ತು ಹೆಲಿಪ್ಯಾಡ್ ನಿರ್ಮಾಣ ಸಿದ್ದಗಂಗಾ ಮಠದ ಬಳಿ ತುರ್ತಾಗಿ ಹತ್ತು ಹೆಲಿಪ್ಯಾಡ್ ನಿರ್ಮಾಣ

ಶ್ರೀಗಳ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ತಜ್ಞ ವೈದ್ಯರು ನಿರಂತರವಾಗಿ ಶ್ರೀಗಳ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮಠದಲ್ಲೇ ಪೊಲೀಸ್ ಕಂಟ್ರೋಲ್ ರೂಂ ವ್ಯವಸ್ಥೆ ಮಾಡಲಾಗಿದೆ.

ತುಮಕೂರು ನಗರ ಮುಖ್ಯದ್ವಾರದಿಂದಲೇ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ನಗರದಾದ್ಯಂತ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದೀಗ ಬಂದ ಸುದ್ದಿ: ಚಿಂತೆ ಬೇಡ, ಶ್ರೀಗಳು ಆರೋಗ್ಯವಾಗಿದ್ದಾರೆ ಇದೀಗ ಬಂದ ಸುದ್ದಿ: ಚಿಂತೆ ಬೇಡ, ಶ್ರೀಗಳು ಆರೋಗ್ಯವಾಗಿದ್ದಾರೆ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ 111 ವರ್ಷ ವಯಸ್ಸಿನ ಶಿವಕುಮಾರ ಶ್ರೀಗಳಿಗೆ ಕಳೆದ ತಿಂಗಳಷ್ಟೇ ಚೆನ್ನೈಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲಾಗಿದ್ದು, ಅವರು ಸದ್ಯಕ್ಕೆ ತುಮಕೂರಿನ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Siddaganga Sri Shivakumara swamiji health is critical, sources said

ಶ್ರೀಗಳ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಹಿರೇಕೆರೂರು ಪ್ರವಾಸ ರದ್ದು ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಮಠಕ್ಕೆ ತೆರಳಿ, ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.

ಬಿಜೆಪಿ ಬರ ಅಧ್ಯಯನ ಪ್ರವಾಸ ಮುಂದೂಡಿಕೆ

ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗಬೇಕಿದ್ದ ಬಿಜೆಪಿ ಶಾಸಕರ ಬರ ಅಧ್ಯಯನ ಪ್ರವಾಸವನ್ನು ಮುಂದೂಡಲಾಗಿದೆ.

"ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ನಾನು ಅವರ ಭೇಟಿಗೆ ತೆರಳುತ್ತಿದ್ದೇನೆ. ಆದ್ದರಿಂದ ಬಿಜೆಪಿಯ ಬರ ಅಧ್ಯಯನ ಪ್ರವಾಸವನ್ನು ಮುಂದೂಡುತ್ತಿದ್ದೇವೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

English summary
Tumakuru's Siddaganga seer Sri Shivakumara swamiji's health condition is critical, sources said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X