ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಗ್ಗೆರೆ ತೋಂಟದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಮಹಾರಥೋತ್ಸವ

By Prasad
|
Google Oneindia Kannada News

ತುಮಕೂರು, ಫೆಬ್ರವರಿ 21 : ಕುಣಿಗಲ್ ತಾಲ್ಲೂಕಿನ ಕಗ್ಗೆರೆ ತೋಂಟದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24ರ ಶಿವರಾತ್ರಿಯಿಂದ ಮಾರ್ಚ್ 9ರವರೆಗೆ ಜರುಗಲಿದೆ.

ಜಾತ್ರೆಯ ಅಂಗವಾಗಿ ಫೆಬ್ರವರಿ 24ರಂದು ಏಕಾದಶ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ, 27ರಂದು ಧ್ವಜಾರೋಹಣ, ಮಾರ್ಚ್ 4ರಂದು ರಾತ್ರಿ 11 ಗಂಟೆಗೆ ಮುತ್ತಿನ ಪಲ್ಲಕ್ಕಿ ಉತ್ಸವ, ಮಾರ್ಚ್ 5ರಂದು ಮಧ್ಯಾಹ್ನ 12 ಗಂಟೆಗೆ ಮಹಾರಥೋತ್ಸವ, ಮಾರ್ಚ್ 8ರಂದು ರಾತ್ರಿ 10 ಗಂಟೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವ, ಮಾರ್ಚ್ 9ರಂದು ಸಂಜೆ 5 ಗಂಟೆಗೆ ಹಾಲುವಾಗಿಲು ಗ್ರಾಮಸ್ಥರಿಂದ ತೆಪ್ಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

ಅಲ್ಲದೆ ಮಾರ್ಚ್ 8ರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ತೋಂಟದ ಸಿದ್ಧಲಿಂಗೇಶ್ವರ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. [ಅಂತ್ಯಸುಬ್ರಹ್ಮಣ್ಯ ಪಾವಗಡದ ನಾಗಲಮಡಿಕೆಯಲ್ಲಿ ರಥೋತ್ಸವ]

ಭಕ್ತಾದಿಗಳು ಪೂಜಾ ಕಾರ್ಯಕ್ರಮ, ಉತ್ಸವಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಆರತಿ ಆನಂದ್ ತಿಳಿಸಿದ್ದಾರೆ. ಭಕ್ತಾದಿಗಳಿಗೆ ಇಲ್ಲಿ ನೋಡಲು ಸಾಕಷ್ಟು ಸ್ಥಳಗಳಿದ್ದು, ತಂಗಲು ಕೂಡ ಸಾಕಷ್ಟು ವ್ಯವಸ್ಥೆಯಿದೆ. [ಶ್ರೀ ಅಪ್ರಮೇಯನ ಪಾದಕ್ಕೆ ಸೂರ್ಯರಶ್ಮಿ]

English summary
Siddalingeshwara Rathotsava will be held in Kunigal taluk in Tumakuru district from Shivaratri, February 24 to March 9. On this occasion various religious activities will be conducted in the pilgrimage place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X