ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
 • search

ತುಮಕೂರು : ಸೋಲಾರ್ ಪಾರ್ಕ್ ಬಗ್ಗೆ ರೈತರೊಂದಿಗೆ ಮಾತುಕತೆ

Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ತುಮಕೂರು, ಸೆಪ್ಟೆಂಬರ್ 29 : ಪಾವಗಡ ತಾಲೂಕಿನ ತಿರುಮಣಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಸಂಬಂಧ ಸ್ಥಳೀಯರೊಂದಿಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದರು. 11 ಸಾವಿರ ಎಕರೆ ಪ್ರದೇಶದಲ್ಲಿ 2000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡುವ ಬೃಹತ್ ಸೋಲಾರ್ ಪಾರ್ಕ್ ನಿರ್ಮಾಣಗೊಳ್ಳಲಿದೆ.

  ಸೋಮವಾರ ತಿರುಮಣಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವರು, ಸ್ಥಳೀಯ ರೈತರು ಮತ್ತು ಜನಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿದರು. 'ರಾಜ್ಯದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಲ್ಲಿ ಈ ಸೋಲಾರ್ ಪಾರ್ಕ್ ಪ್ರಮುಖವಾದ ಪಾತ್ರವನ್ನು ವಹಿಸಲಿದೆ' ಎಂದು ಹೇಳಿದರು. [ಪಾವಗಡಕ್ಕೆ ಬಂತು ಸೋಲಾರ್ ಪಾರ್ಕ್]

  tumakuru

  'ಕರ್ನಾಟಕ ಸೋಲಾರ್ ಪವರ್ ಡೆವಲಪ್‌ಮೆಂಟ್ ಕಾರ್ಪೋರೇಷನ್‌ ವತಿಯಿಂದ ಪಾರ್ಕ್ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಯೋಜನೆಗೆ ಒಪ್ಪಿಗೆ ನೀಡಿದ್ದು, 11 ಸಾವಿರ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುವ ಪಾರ್ಕ್‌ 2000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಿದೆ' ಎಂದರು. [ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೌರಶಕ್ತಿ ಮೇಲ್ಛಾವಣಿ ಬಲ]

  'ಸೋಲಾರ್ ಪಾರ್ಕ್ ಸ್ಥಾಪನೆಗೆ ಜಮೀನು ಗುತ್ತಿಗೆ ನೀಡುವ ರೈತರಿಗೆ ಪ್ರತಿ ಎಕರೆಗೆ ವರ್ಷಕ್ಕೆ 21,000 ರೂ. ಗುತ್ತಿಗೆ ದರ ನೀಡಲಾಗುತ್ತದೆ. ಎರಡು ವರ್ಷಕ್ಕೊಮ್ಮೆ ಗುತ್ತಿಗೆ ದರವನ್ನು ಶೇ 5ರಷ್ಟು ಏರಿಕೆ ಮಾಡಲಾಗುತ್ತದೆ. ರೈತರು 30 ವರ್ಷಗಳ ಅವಧಿಗೆ ಜಮೀನನ್ನು ಗುತ್ತಿಗೆ ನೀಡಬೇಕಾಗುತ್ತದೆ. ನೋಂದಣಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ' ಎಂದು ಸಚಿವರು ರೈತರಿಗೆ ಮಾಹಿತಿ ನೀಡಿದರು. [ಕರ್ನಾಟಕದಲ್ಲಿ ಹರ್ಭಜನ್ 'ಸೌರಘಟಕ' ಸ್ಥಾಪನೆ]

  pavagada

  ಕೇಂದ್ರ ಸರ್ಕಾರದ ನೆರವಿನೊಂದಿಗೆ ದೇಶದಾದ್ಯಂತ 25 ಸೋಲಾರ್ ಪಾರ್ಕ್‌ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗಾಗಿ ಕರ್ನಾಟಕದಲ್ಲಿ ಅತಿಹೆಚ್ಚು ಉಷ್ಣಾಂಶವಿರುವ ಪಾವಗಡ ತಾಲೂಕನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಏಷ್ಯಾದಲ್ಲಿಯೇ ಇದು ದೊಡ್ಡ ಸೌರ ಪಾರ್ಕ್ ಎಂಬ ಖ್ಯಾತಿಗೆ ಪಾತ್ರವಾಗಲಿದೆ.

  ಮಧ್ಯಪ್ರದೇಶದಲ್ಲಿ 750 ಮೆಗಾವಾಟ್, ಆಂಧ್ರಪ್ರದೇಶದಲ್ಲಿ 1 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡುವ ಸೋಲಾರ್ ಪಾರ್ಕ್‌ಗಳಿವೆ. ಇವುಗಳನ್ನು ಹೊರತುಪಡಿಸಿದರೆ ಪಾವಗಡದ 2 ಸಾವಿರ ಮೆಗಾವಾಟ್ ಸಾಮರ್ಥ್ಯದ ಪಾರ್ಕ್ ಏಷ್ಯಾದಲ್ಲೇ ದೊಡ್ಡ ಪಾರ್ಕ್ ಆಗಲಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Karnataka Energy Minister DK Shivakumar visited Pavagada taluk of Tumkur district on Monday and discuss with farmers about 2000 MW solar park to be established on 11,000 acres of land.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more