ಉಡುಪಿ, ದಕ್ಷಿಣ ಕನ್ನಡದಲ್ಲಿ 1,400 ಕಿಂಡಿ ಅಣೆಕಟ್ಟು ನಿರ್ಮಾಣ

ಉಡುಪಿ, ಜನವರಿ 30; "ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲು ಸ್ಥಳ ಗುರುತಿಸಲಾಗಿದೆ" ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಖಾತೆ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5.60 ಲಕ್ಷ ರೂ. ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳನ್ನು ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, "1,400 ಕಿಂಡಿ ಅಣೆಕಟ್ಟುಗಳಿಗೆ ಸ್ಥಳ ಗುರುತಿಸಲಾಗಿದ್ದು ಈ ವರ್ಷ ಇದಕ್ಕಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ" ಎಂದರು.

"ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹರಿದು ಸಮುದ್ರ ಸೇರುವ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಈ ಭಾಗದಲ್ಲಿ ಅಂರ್ತಜಲ ವೃದ್ಧಿಯ ಜೊತೆಗೆ ,ಮಣ್ಣಿನ ಫಲವತ್ತತೆ ವೃದ್ಧಿ ಸಹ ಸಾಧ್ಯವಾಗಲಿದೆ" ಎಂದು ಸಚಿವರು ವಿವರಣೆ ನೀಡಿದರು.

1400 Vented Dams To Construct In Udupi And Dakshina Kannada Districts

"ಈ ಭಾಗದ ಡ್ರೀಮ್ಡ್ ಅರಣ್ಯ ಸಮಸ್ಯೆಗೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡ್ರೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರ್ಹ ಭೂ ರಹಿತರಿಗೆ ನೀಡಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

"ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡ್ರೀಮ್ಡ್ ಅರಣ್ಯದ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ. ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗಿರುವ ಹೂಳು ತೆಗೆಯಲು ಸಹ ಯೋಜನೆ ರೂಪಿಸಲಾಗಿದೆ" ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, "ಈ ಭಾಗದಲ್ಲಿ ಅಂರ್ತಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದೆ. 2018 ರಿಂದ 2023ರ ಅವಧಿಯೊಳಗೆ 100 ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯಿದೆ" ಎಂದರು.

"ಡ್ರೀಮ್ಡ್ ಫಾರೆಸ್ಟ್‌ನಿಂದ ಈ ಭಾಗದಲ್ಲಿ ಅಭಿವೃದ್ದಿ ಕುಂಠಿತವಾಗಿದ್ದು, ಪ್ರಸ್ತುತ ಸರಕಾರ ಡ್ರೀಮ್ಡ್ ಫಾರೆಸ್ಟ್ ನಿಂದ ಭೂಮಿಯನ್ನು ಕೈಬಿಡುವ ಕುರಿತಂತೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಈ ಬಗ್ಗೆ ಶೀಘ್ರದಲ್ಲಿ ಸರ್ಕಾರದ ಸುತ್ತೋಲೆ ಆಗಲಿದೆ, ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ" ಎಂದು ಹೇಳಿದರು.

ಶಿವಪುರ ಗ್ರಾಮದ ದೇವಸ್ಥಾನಬೆಟ್ಟುನಲ್ಲಿ 1.50 ಲಕ್ಷ ರೂ., ಪುತ್ತಿಬೆಟ್ಟುವಿನಲ್ಲಿ 1.50 ಲಕ್ಷ ರೂ., ಮುಕ್ಕಾಣಿ ಗೋನುಮಾರುವಿನಲ್ಲಿ 1.55 ಲಕ್ಷ ರೂ., ಕುಂಟೆಬೆಟ್ಟುವಿನಲ್ಲಿ 1.05 ಲಕ್ಷ ರೂ. ಸೇರಿದಂತೆ ಒಟ್ಟು 5.60 ಲಕ್ಷ ರೂ. ಗಳ ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.

Vented dam

ಕಿಂಡಿ ಅಣೆಕಟ್ಟುಗಳ ವೀಕ್ಷಣೆ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಸಚಿವ ಜೆ. ಸಿ. ಮಾಧುಸ್ವಾಮಿ ಬೆಳ್ತಂಗಡಿ ತಾಲ್ಲೂಕಿನ ವಿವಿಧೆಡೆ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಸುಮಾರು 30 ಕೋಟಿ ರೂ. ಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳ ಹಾಗೂ ಕಿಂಡಿ ಅಣೆಕಟ್ಟುಗಳ ಕಾಮಗಾರಿಗಳ ವೀಕ್ಷಣೆ ಮಾಡಿದರು.

ಧರ್ಮಸ್ಥಳ ಬಳಿ ಮುಳ್ಳಿಕಾರ್ ಎಂಬಲ್ಲಿ ಸುಮಾರು 14.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟು ವೀಕ್ಷಿಸಿದರು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪೂಜಿರಡಕ ಬಳಿ 4.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿ ಪರಿಶೀಲಿಸಿದರು.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಹತ್ತಿರದ ಕಡಂಬಳ್ಳಿ ಬಳಿ 2 ಕೋಟಿ ರ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿ ವೀಕ್ಷಣೆ ಮಾಡಿದರು. ಬಳಿಕ ತಾಲೂಕಿನ ಕಣಿಯೂರು ಹತ್ತಿರ ಶೆರಡಾಲು ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿ ವೀಕ್ಷಣೆ ಮಾಡಿದರು.

Recommended Video

      IPLನಲ್ಲಿ ಈ ಬಾರಿ ಮಾರಾಟವಾಗದೆ ಉಳಿಯಬಹುದಾದ ಆಟಗಾರರು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+