• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಲ್ಪೆ ಬಂದರಿಗೆ ದಾಳಿ: ಮೀನು ಆಯ್ದು ಮಾರಾಟ ಮಾಡುತ್ತಿದ್ದ 17 ಮಕ್ಕಳ ರಕ್ಷಣೆ

By ಉಡುಪಿ ಪ್ರತಿನಿಧಿ
|

ಉಡುಪಿ, ಅಕ್ಟೋಬರ್ 29: ಬೆಳ್ಳಂಬೆಳಿಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ದಾಳಿ ನಡೆಸಿ 17 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಕಲಾ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಉಡುಪಿ; ಈದ್ ಮಿಲಾದ್ ಆಚರಣೆಗೆ ಮಾರ್ಗಸೂಚಿ ಪಾಲಿಸಲು ಡಿಸಿ ಆದೇಶ

ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.

ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್ ಇದ್ದರು.

ಅದೇ ರೀತಿ ಸುರಕ್ಷಾ-ಸುನಂದಾ ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ಧರು.

English summary
The Child Protection Unit and other department officials attacked the Malpe harbor in Udupi district and rescued 17 child Labourers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X