ಮಣಿಪಾಲದಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ: ಅತ್ಯಾಚಾರ ಶಂಕೆ

ಉಡುಪಿ, ಮಾರ್ಚ್ 11:ಉಡುಪಿ ಹೊರವಲಯದ ಮಣಿಪಾಲದಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಸಮೀಪದ ಶಿವಳ್ಳಿ ಗ್ರಾಮದ ಸಗ್ರಿ ಎಂಬಲ್ಲಿ ಈ ಘಟನೆ ನಡೆದಿದೆ.

ಇಲ್ಲಿಗೆ ಸಮೀಪದ ಅರಣ್ಯ ಪ್ರದೇಶದಲ್ಲಿ ಬಾಲಕಿಯೊಬ್ಬಳ ಮೃತದೇಹ ಅರೆ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಮೃತ ಅಪ್ರಾಪ್ತ ಬಾಲಕಿಯನ್ನು ಬಾದಾಮಿ ಮೂಲದ ವಲಸೆ ಕಾರ್ಮಿಕರ ಪುತ್ರಿ ಎಂದು ಹೇಳಲಾಗಿದೆ.

ನಿಟ್ಟೂರಿನಲ್ಲಿ ವಾಸವಾಗಿರುವ ಈಕೆ ಮಾರ್ಚ್ 9 ರಂದು ಮಧ್ಯಾಹ್ನದ ವೇಳೆ ತಾನು ಕೆಲಸ ಮಾಡುತ್ತಿದ್ದ ಉಡುಪಿಯ ಅಂಗಡಿಯಿಂದ ಮನೆಗೆ ಹೊರಟವಳು ನಾಪತ್ತೆಯಾಗಿದ್ದಳು ಎಂದು ಹೇಳಲಾಗಿದೆ.

17 year old girl allegedly raped in Sagri

ಆದರೆ ಭಾನುವಾರ (ಮಾ.10) ಸಂಜೆ ಸಗ್ರಿಯ ಹಾಡಿಯಲ್ಲಿ ಬಾಲಕಿಯ ಮೃತದೇಹವೊಂದು ಅರೆ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹದ ಕೆಲವು ಭಾಗಗಳು ಕೊಳೆತ ಸ್ಥಿತಿಯಲ್ಲಿದ್ದು, ಕುತ್ತಿಗೆಗೆ ಶಾಲು ಬಿಗಿದಿರುವುದು ಕಂಡು ಬಂದಿತ್ತು.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಣಿಪಾಲ ಶವಗಾರದಲ್ಲಿ ಇರಿಸಲಾಗಿದ್ದು, ಮನೆಯವರನ್ನು ಕರೆಸಿ ಮೃತದೇಹದ ಗುರುತು ಪತ್ತೆ ಮಾಡಲಾಗಿದೆ. ದುಷ್ಕರ್ಮಿಗಳು ಆಕೆಯನ್ನು ಹಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮಣಿಪಾಲ ವಿಧಿ ವಿಜ್ಞಾನ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+