• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಕಿಂಗ್ ನ್ಯೂಸ್: ಉಡುಪಿಯಲ್ಲಿ 204 ಕೊರೊನಾ ವೈರಸ್ ಪ್ರಕರಣ ಪತ್ತೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 5: ಉಡುಪಿ ಜಿಲ್ಲೆಯಲ್ಲಿ 204 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಇಂದಿನ ವರದಿಯಿಂದ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಟ್ಟು 768 ಕ್ಕೆ ಏರಿಕೆಯಾಗಿದೆ.

ಇಂದು 2000 ಕ್ಕಿಂತ ಹೆಚ್ಚು ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು, ಅವುಗಳಲ್ಲಿ 204 ಕೊರೊನಾ ವೈರಸ್ ಸೋಂಕುಗಳು ಪತ್ತೆಯಾಗಿವೆ. ಇದರಲ್ಲಿ 203 ಜನ ಮಹಾರಾಷ್ಟ್ರ ಮೂಲದವರಾಗಿದ್ದು, ಸೋಂಕಿತರ ಪೈಕಿ ಓರ್ವ ಸ್ಥಳೀಯ ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.

ಉಡುಪಿ: ಕೊರೊನಾ ವೈರಸ್ ನಿಂದ 9 ಜನ ಪೊಲೀಸರು ಗುಣಮುಖಉಡುಪಿ: ಕೊರೊನಾ ವೈರಸ್ ನಿಂದ 9 ಜನ ಪೊಲೀಸರು ಗುಣಮುಖ

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇಲಾಖಾ ಸಿಬ್ಬಂದಿಗಳ ತಪಾಸಣೆ ವೇಳೆ ಕೊರೊನಾ ವೈರಸ್ ಪತ್ತೆಯಾಗಿದೆ. 157 ಜನ ಪುರುಷರು, 40 ಮಹಿಳೆಯರು ಮತ್ತು 7 ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ. ಕೊರೊನಾ ವೈರಸ್ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಹೊರ ರಾಜ್ಯಗಳಿಂದ ಬಂದಿರುವ ಎಂಟು ಸಾವಿರಕ್ಕೂ ಹೆಚ್ಚು ಜನರ ಬಹುತೇಕ ಪರೀಕ್ಷೆ ಮುಗಿದಿದ್ದು, ಇಂದು ಸಂಜೆಯೊಳಗೆ ಎಲ್ಲಾ ಟೆಸ್ಟ್ ಮುಗಿಯುತ್ತದೆ. ಆ ಬಳಿಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಲಿದೆ. ನಂತರ ನಾವು ತೀವ್ರ ಉಸಿರಾಟದ ತೊಂದರೆ ಮತ್ತು ಕೊರೊನಾ ಲಕ್ಷಣ ಕಂಡುಬಂದವರ ಪರೀಕ್ಷೆ ನಡೆಸಲಿದ್ದೇವೆ ಎಂದು ಡಿಸಿ ತಿಳಿಸಿದರು.

English summary
204 new cases of coronavirus have been detected in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion