ಇಂದು ಉಡುಪಿಯಲ್ಲಿ 248, ಚಿತ್ರದುರ್ಗದಲ್ಲಿ 48 ಕೊರೊನಾ ಸೋಂಕು ದೃಢ

ಉಡುಪಿ, ಜುಲೈ 30: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು ಬರೋಬ್ಬರಿ 248 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.

Recommended Video

      ಏನಿದು ಹೊಸ ಶಿಕ್ಷಣ ರೀತಿ?ಏನಿದು ಹೊಸ ಸಚಿವಾಲಯ ಬದಲಾವಣೆ? | Oneindia Kannada

      ಇಂದಿನ ಹೊಸ ಪ್ರಕರಣಗಳ ಸೇರ್ಪಡೆಯಿಂದ ಉಡುಪಿ ಜಿಲ್ಲೆಯ ಸೋಂಕಿತರ ಸಂಖ್ಯೆ 4,143 ಕ್ಕೆ ಏರಿಕೆ ಕಂಡಿದೆ. ಕೋವಿಡ್-೧೯ ನಿಂದ ಗುಣಮುಖರಾಗಿ 122 ಸೋಂಕಿತ ಜನ ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 1669 ಕೊರೊನಾ ಸಕ್ರಿಯ ಪ್ರಕರಣಗಳಿವೆ.

      ಚಿತ್ರದುರ್ಗ ಜಿಲ್ಲೆಯಲ್ಲಿ 48 ಜನರಿಗೆ ಕೋವಿಡ್ ಸೋಂಕು ದೃಢ

      ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 48 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 625 ಕ್ಕೆ ಏರಿಕೆಯಾದಂತಾಗಿದೆ.

      248 New Coronavirus Infection Cases Reported In Udupi District

      ಚಿತ್ರದುರ್ಗ ತಾಲ್ಲೂಕಿನಲ್ಲಿ 13, ಹೊಳಲ್ಕೆರೆ-05, ಹಿರಿಯೂರು-09, ಚಳ್ಳಕೆರೆ-08, ಹೊಸದುರ್ಗ-08 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 05 ಸೇರಿದಂತೆ ಒಟ್ಟು 48 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

      ಒಟ್ಟು 474 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು, ಇದುವರೆಗೆ ಜಿಲ್ಲೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತರ ಪೈಕಿ ಈಗಾಗಲೆ 198 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 415 ಸಕ್ರಿಯ ಪ್ರಕರಣಗಳು ಇವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+