Get Updates
Get notified of breaking news, exclusive insights, and must-see stories!

2nd PUC Exam; ಉಡುಪಿಯಲ್ಲಿ ಹಿಜಾಬ್ ವಿದ್ಯಾರ್ಥಿನಿಯರ ಹೈಡ್ರಾಮ!

ಉಡುಪಿ, ಏಪ್ರಿಲ್ 22: ಹಿಜಾಬ್ ವಿಚಾರವಾಗಿ ರಾಷ್ಟ್ರದಾದ್ಯಂತ ಗದ್ದಲ ಎಬ್ಬಿಸಿದ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರ ಪೈಕಿ ನಾಲ್ವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರಾ? ಇಲ್ಲವಾ ಎಂಬ ಗೊಂದಲಕ್ಕೆ ಉತ್ತರ ಸಿಕ್ಕಿದೆ. ರಾಜ್ಯ ಸರ್ಕಾರದ ಆದೇಶದ ನಡುವೆಯೂ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಇಬ್ಬರು ಹಿಜಾಬ್ ಪರ ಹೋರಾಟಗಾರ್ತಿ ವಿದ್ಯಾರ್ಥಿನಿಯರು ಹಿಜಾಬ್‌ಗಾಗಿ ಪಟ್ಟು ಹಿಡಿದು ಪರೀಕ್ಷೆ ಬರೆಯದೇ ಮನೆ ಕಡೆ ಮುಖ ಮಾಡಿದ್ದಾರೆ.

ಆರು ಮಂದಿ ಹಿಜಾಬ್ ವಿದ್ಯಾರ್ಥಿನಿಯರ ಪೈಕಿ ಪ್ರಮುಖ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದ ಆಲಿಯಾ ಅಸಾದಿ ಮತ್ತು ರೇಶಂಗೆ ಇಂದು ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯ ಕೊನೆಯ ಕ್ಷಣದಲ್ಲಿ ಈ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು.

ಪರೀಕ್ಷೆ ಆರಂಭದ ಕೊನೆಯ ಕ್ಷಣದಲ್ಲಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಹಿಂಬದಿಯ ಗೇಟ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆದಿದ್ದಾರೆ.

Udupi: 2nd PUC Exam: Hijab Girls Not Attending Exam Due To No Permission For Hijab

ಬುರ್ಖಾ ತೊಟ್ಟು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆದು ಹಿಜಾಬ್ ಧರಿಸಿಯೇ ಪರೀಕ್ಷೆಗೆ ಹಾಜರಾಗುತ್ತೇವೆ ಅಂತಾ ಪಟ್ಟು ಹಿಡಿದಿದ್ದಾರೆ. ಈ ವೇಳೆ ಪರೀಕ್ಷೆ ಕೊಠಡಿಯಲ್ಲಿದ್ದ ಸಿಬ್ಬಂದಿ ಸರ್ಕಾರದ ಸುತ್ತೋಲೆ, ಹೈಕೋರ್ಟ್‌ನ ಆದೇಶದ ಬಗ್ಗೆ ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದ್ದಾರೆ.

ಆದರೆ ವಿದ್ಯಾರ್ಥಿನಿಯರು ಸಿಬ್ಬಂದಿ ಜೊತೆ ಗಟ್ಟಿ ಸ್ವರದಲ್ಲಿ ವಾಗ್ವಾದ ಮಾಡಿದ ಕಾರಣ ಪರೀಕ್ಷಾ ಕೇಂದ್ರಕ್ಕೆ ತಹಶೀಲ್ದಾರ ಅರ್ಚನಾ ಭಟ್, ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಯೊಳಗೆ ತೆರಳಿ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದಿದ್ದಾರೆ. ಈ ವೇಳೆ ಅಧಿಕಾರಿಗಳು ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Udupi: 2nd PUC Exam: Hijab Girls Not Attending Exam Due To No Permission For Hijab

ಅಧಿಕಾರಿಗಳ ಎಚ್ಚರಿಕೆಯ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರಾದ ಆಲಿಯಾ ಅಸದಿ ಮತ್ತು ರೇಶಂ ಪರೀಕ್ಷೆ ಬರೆಯದೇ ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ, ಅಧಿಕಾರಿಗಳು ವಿದ್ಯಾರ್ಥಿನಿಯರನ್ನು ಪರೀಕ್ಷಾ ಕೇಂದ್ರದಿಂದ ಹೊರಗೆ ಕಳುಹಿಸಿದ್ದಾರೆ.

ಈ ಮೂಲಕ ವಿದ್ಯಾರ್ಥಿನಿಯರು ಪರೀಕ್ಷೆಗಿಂತ ಹಿಜಾಬೇ ಮುಖ್ಯ ಅಂತಾ ತಮ್ಮ ನಿರ್ಧಾರ ಸ್ಪಷ್ಟಪಡಿಸಿದ್ದಾರೆ. ಪರೀಕ್ಷಾ ಕೇಂದ್ರದಿಂದ ಆಟೋ ಮೂಲಕ ವಿದ್ಯಾರ್ಥಿನಿಯರು ಮನೆಯತ್ತ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ.

Udupi: 2nd PUC Exam: Hijab Girls Not Attending Exam Due To No Permission For Hijab

ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಡೆಯಲಿದೆ. 14,597 ಹೊಸ, 326 ಖಾಸಗಿ ಮತ್ತು 349 ಪುನರಾವರ್ತಿತ ಅಭ್ಯರ್ಥಿಗಳು ಸೇರಿ 15,272 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಇದರಲ್ಲಿ ವಿಜ್ಞಾನ ವಿಭಾಗದ 2,203 ವಿದ್ಯಾರ್ಥಿಗಳು, 2,589 ವಿದ್ಯಾರ್ಥಿನಿಯರು, ವಾಣಿಜ್ಯ ವಿಭಾಗದ 3,935 ವಿದ್ಯಾರ್ಥಿಗಳು, 3,915 ವಿದ್ಯಾರ್ಥಿನಿಯರು, ಕಲಾ ವಿಭಾಗದ 796 ವಿದ್ಯಾರ್ಥಿಗಳು, 728 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಒಟ್ಟಾರೆಯಾಗಿ ವಿಜ್ಞಾನ ವಿಭಾಗದ 4,792, ವಾಣಿಜ್ಯ ವಿಭಾಗದ 7,850 ಹಾಗೂ ಕಲಾ ವಿಭಾಗದ 1,524 ವಿದ್ಯಾರ್ಥಿಗಳು ಇದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+