ಬಸ್ ಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

By: ಉಡುಪಿ ಪ್ರತಿನಿಧಿ
Subscribe to Oneindia Kannada

ಉಡುಪಿ, ಅಕ್ಟೋಬರ್. 31 : ಗ್ಯಾಸ್ ಟ್ಯಾಂಕರ್ ಲಾರಿ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಉರುಳಿ ಬಿದ್ದಿರುವ ಘಟನೆ ಸೋಮವಾರ ಬೆಳಿಗ್ಗೆ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 30 ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ.

ಎಕೆಎಂಎಸ್ ವೇಗದೂತ ಬಸ್‌ ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಅನಿಲ ಟ್ಯಾಂಕರೊಂದು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು. ಬಸ್ ನಲ್ಲಿ ಪ್ರಯಾಣಿಸುತಿದ್ದ 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

Udupi: Overtake bid- Gas tanker hits bus at Kinnimulki,30 injured

ಈ ಅಪಘಾತದಿಂದ ಕೆಲ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು , ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A gas tanker hit a passenger bus at Kinnimulki here injuring 30 persons on Monday, October 31.
Please Wait while comments are loading...