ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಲಂಡನ್‌ನಿಂದ ಬಂದ 36 ಜನರ ಕೋವಿಡ್ ವರದಿ ನೆಗೆಟೀವ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 29; " ಉಡುಪಿ ಜಿಲ್ಲೆಗೆ ಲಂಡನ್‌ನಿಂದ 36 ಜನರು ವಾಪಸ್ ಬಂದಿದ್ದಾರೆ. ಅವರೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದ್ದೇವೆ. ಎಲ್ಲರ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ" ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

Recommended Video

ಭಾರತಕ್ಕೂ ವಕ್ಕರಿಸಿದ ರೂಪಾಂತರ Coronavirus‌, ಬೆಂಗಳೂರಿನಲ್ಲಿ 3 ಕೇಸ್ ಪತ್ತೆ | Oneindia Kannada

ಮಂಗಳವಾರ ಮಾತನಾಡಿದ ಜಿಲ್ಲಾಧಿಕಾರಿಗಳು, "ರೂಪಾಂತರ ಕೋವಿಡ್ ಸೋಂಕಿನ ಬಗ್ಗೆ ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ. ಎಲ್ಲರ ವರದಿ ನಗೆಟೀವ್ ಬಂದಿದೆ ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಅವರೆಲ್ಲರನ್ನೂ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ" ಎಂದರು.

ಕೊರೊನಾ ಲಸಿಕೆ ವಿತರಣೆಗೂ ಮುನ್ನ ಎದುರಾಗಿದೆ ಮತ್ತೊಂದು ಸಮಸ್ಯೆ ಕೊರೊನಾ ಲಸಿಕೆ ವಿತರಣೆಗೂ ಮುನ್ನ ಎದುರಾಗಿದೆ ಮತ್ತೊಂದು ಸಮಸ್ಯೆ

"ಆರೋಗ್ಯ ಇಲಾಖೆ ಅಧಿಕಾರಿಗಳು ಲಂಡನ್‌ನಿಂದ ಆಗಮಿಸಿದವರ ನಿರಂತರ ಸಂಪರ್ಕದಲ್ಲಿದ್ದಾರೆ. ರೋಗದ ಲಕ್ಷಣಗಳು ಕಂಡುಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೋವಿಡ್-19 ಮಾರ್ಗಸೂಚಿ ಜನವರಿ 31ರವರೆಗೂ ವಿಸ್ತರಣೆಕೋವಿಡ್-19 ಮಾರ್ಗಸೂಚಿ ಜನವರಿ 31ರವರೆಗೂ ವಿಸ್ತರಣೆ

36 People Who Returned From London Tested Negative For COVID

"ಸದ್ಯಕ್ಕೆ ಜಿಲ್ಲೆಯಲ್ಲಿ ಬ್ರಿಟನ್ ವೈರಸ್ ಆತಂಕ ಇಲ್ಲ. ಜನರು ಮಾಸ್ಕ್ ಹಾಕುವುದು, ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕಲಾಗುವುದು" ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ 22,272 ಹೊಸ ಕೋವಿಡ್ ಪ್ರಕರಣ ಪತ್ತೆಭಾರತದಲ್ಲಿ 22,272 ಹೊಸ ಕೋವಿಡ್ ಪ್ರಕರಣ ಪತ್ತೆ

ಸೋಮವಾರದ ವರದಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 14 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 23021. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 66.

ಮೂವರಲ್ಲಿ ಸೋಂಕು; ಬ್ರಿಟನ್‌ನಲ್ಲಿ ಪತ್ತೆಯಾಗಿರುವ ರೂಪಾಂತರ ಕೋವಿಡ್ ಸೋಂಕು ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದೆ. ಬೆಂಗಳೂರು ನಗರಕ್ಕೆ ಬ್ರಿಟನ್‌ನಿಂದ ವಾಪಸ್ ಆಗಿರುವ ಮೂವರಲ್ಲಿ ಸೋಂಕು ಪತ್ತೆಯಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.

English summary
36 people returned from London to Udupi. Covid 19 test conducted to all and reports negative said Jagadeesh deputy commissioner of Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X