ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಉಡುಪಿ, ಜುಲೈ 13: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಪಡುಬೆಳ್ಳೆಯಲ್ಲಿ ನಡೆದಿದೆ.
ಪಡುಬೆಳ್ಳೆಯಲ್ಲಿ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದ ಶಂಕರ ಆಚಾರ್ಯ (50), ನಿರ್ಮಲ ಆಚಾರ್ಯ( 44) ಮತ್ತು ಅವರ ಇಬ್ಬರು ಮಕ್ಕಳಾದ ಶ್ರೇಯಾ( 22) ಹಾಗೂ ಶೃತಿ (23) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ನಾಲ್ಕೂ ಜನ ಸೈನಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications