ಮುಂಬೈ ಟು ಉಡುಪಿ: ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್
ಉಡುಪಿ, ಮೇ 19: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ನಿನ್ನೆಯಷ್ಟೇ ಮುಂಬೈನಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಏಳು ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢಗೊಂಡಿತ್ತು.ಇಂದು ಮತ್ತೆ ನಾಲ್ವರಿಗೆ ಸೋಂಕು ಇರುವುದು ಖಚಿತಗೊಂಡಿದೆ.
ನಾಲ್ವರಲ್ಲಿ ಮೂವರು ಗಂಡಸರು, ಮತ್ತು ಓರ್ವ ಮಹಿಳೆ ಸೇರಿದ್ದಾರೆ. ಬೆಳಿಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ 1286- 24 ವರ್ಷದ ಪುರುಷ, 1287- 24 ವರ್ಷದ ಮಹಿಳೆ, 1288- 8 ವರ್ಷದ ಗಂಡುಮಗು, 1289- 38 ವರ್ಷ ಪುರುಷ ಸೋಂಕಿತರಾಗಿದ್ದಾರೆ.

ಮೇಲಿನವರೆಲ್ಲ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿ ಇದ್ದವರು. ಉಡುಪಿಗೆ ಇಲ್ಲಿಯವರೆಗೆ ಹೊರದೇಶ ಮತ್ತು ಹೊರ ರಾಜ್ಯಗಳಿಂದ ಆರು ಸಾವಿರಕ್ಕೂ ಹೆಚ್ಚು ಜನ ಆಗಮಿಸಿದ್ದಾರೆ.












Click it and Unblock the Notifications