ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ 5,800 ವಿದ್ಯಾರ್ಥಿಗಳು ಕ್ವಾರಂಟೈನ್
ಉಡುಪಿ, ಮಾರ್ಚ್ 23: ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ನಂತರ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಸಂಪರ್ಕಿತರಲ್ಲಿ ಭಾನುವಾರ ಒಟ್ಟು 145 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಮಣಿಪಾಲ್‌ನಲ್ಲಿ) ಕ್ಯಾಂಪಸ್‌ನಲ್ಲಿ ಒಟ್ಟು 299 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಎಂಐಟಿ ಕ್ಯಾಂಪಸ್‌ನಲ್ಲಿ ಒಟ್ಟು 5800 ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡಾ ಹೇಳಿದರು.

ಕೊರೊನಾ 2ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಮಣಿಪಾಲ ಯೂನಿವರ್ಸಿಟಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ಕಟ್ಟುನಿಟ್ಟಿನ ಕ್ರಮಗಳನ್ನು ನೆನಪಿಸುವ ರೀತಿಯಲ್ಲೇ ಈ ಸಲವೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಾರಂಭಗೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಖುದ್ದು ಮಂಗಳವಾರ ಉಡುಪಿ ನಗರದ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ, ಮಾಸ್ಕ್ ಹಾಕದೇ ಇರುವವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಸ್ಥಳದಲ್ಲೇ ದಂಡ ವಿಧಿಸಿದರು.

ಕೆಲವು ಅಂಗಡಿಗಳಲ್ಲಿ ಮಾಸ್ಕ್ ಹಾಕದೇ ಇರುವ ಅಂಗಡಿಯವರು ಮತ್ತು ಗ್ರಾಹಕರನ್ನು ತರಾಟೆಗೆ ತೆಗೆದುಕೊಂಡ ಡಿಸಿ ಜಿ.ಜಗದೀಶ್, ಅಂಗಡಿಯವರಿಗೆ ತಲಾ ಐದು ಸಾವಿರ ದಂಡ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು, ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ನಾಗರೀಕರು ಎಚ್ಚರಿಕೆಯಿಂದ ಇರಬೇಕು. ಸಾಮಾಜಿಕ ಅಂತರ ಕಾಪಾಡಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸೂಚಿಸಿದರು.
ಸಭೆ, ಸಮಾರಂಭ ನಡೆಸುವವರು ಕಡ್ಡಾಯವಾಗಿ ಸ್ಥಳೀಯ ತಹಶೀಲ್ದಾರ ಅವರ ಗಮನಕ್ಕೆ ತರಬೇಕು. ಕೋವಿಡ್ ನಿಯಮಾವಳಿಯನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications