ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ 5,800 ವಿದ್ಯಾರ್ಥಿಗಳು ಕ್ವಾರಂಟೈನ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 23: ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ನಂತರ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಸಂಪರ್ಕಿತರಲ್ಲಿ ಭಾನುವಾರ ಒಟ್ಟು 145 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಮಣಿಪಾಲ್‌ನಲ್ಲಿ) ಕ್ಯಾಂಪಸ್‌ನಲ್ಲಿ ಒಟ್ಟು 299 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

86 ಕೋವಿಡ್ ಪ್ರಕರಣ ಪತ್ತೆ: ಕಂಟೈನ್ಮೆಂಟ್ ಝೋನ್ ವ್ಯಾಪ್ತಿಗೆ ಮಣಿಪಾಲ ಎಂಐಟಿ ಕ್ಯಾಂಪಸ್ 86 ಕೋವಿಡ್ ಪ್ರಕರಣ ಪತ್ತೆ: ಕಂಟೈನ್ಮೆಂಟ್ ಝೋನ್ ವ್ಯಾಪ್ತಿಗೆ ಮಣಿಪಾಲ ಎಂಐಟಿ ಕ್ಯಾಂಪಸ್

ಎಂಐಟಿ ಕ್ಯಾಂಪಸ್‌ನಲ್ಲಿ ಒಟ್ಟು 5800 ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡಾ ಹೇಳಿದರು.

5,800 Students Of Manipal University Quarantined After 145 Covid-19 Cases Reported In Campus

ಕೊರೊನಾ 2ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಮಣಿಪಾಲ ಯೂನಿವರ್ಸಿಟಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ಕಟ್ಟುನಿಟ್ಟಿನ ಕ್ರಮಗಳನ್ನು ನೆನಪಿಸುವ ರೀತಿಯಲ್ಲೇ ಈ ಸಲವೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಾರಂಭಗೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಖುದ್ದು ಮಂಗಳವಾರ ಉಡುಪಿ ನಗರದ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ, ಮಾಸ್ಕ್ ಹಾಕದೇ ಇರುವವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಸ್ಥಳದಲ್ಲೇ ದಂಡ ವಿಧಿಸಿದರು.

5,800 Students Of Manipal University Quarantined After 145 Covid-19 Cases Reported In Campus

ಕೆಲವು ಅಂಗಡಿಗಳಲ್ಲಿ ಮಾಸ್ಕ್ ಹಾಕದೇ ಇರುವ ಅಂಗಡಿಯವರು ಮತ್ತು ಗ್ರಾಹಕರನ್ನು ತರಾಟೆಗೆ ತೆಗೆದುಕೊಂಡ ಡಿಸಿ ಜಿ.ಜಗದೀಶ್, ಅಂಗಡಿಯವರಿಗೆ ತಲಾ ಐದು ಸಾವಿರ ದಂಡ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಅವರು, ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ನಾಗರೀಕರು ಎಚ್ಚರಿಕೆಯಿಂದ ಇರಬೇಕು. ಸಾಮಾಜಿಕ ಅಂತರ ಕಾಪಾಡಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸೂಚಿಸಿದರು.

ಸಭೆ, ಸಮಾರಂಭ ನಡೆಸುವವರು ಕಡ್ಡಾಯವಾಗಿ ಸ್ಥಳೀಯ ತಹಶೀಲ್ದಾರ ಅವರ ಗಮನಕ್ಕೆ ತರಬೇಕು. ಕೋವಿಡ್ ನಿಯಮಾವಳಿಯನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

Recommended Video

ಸಿಡಿ ಕೇಸಿಗೆ ಸಿಗಲಿದೆಯಾ ಮಹಾ ಟ್ವಿಸ್ಟ್ ! | Oneindia Kannada

English summary
A total of 5,800 students have undergone quarantine after 145 coronavirus cases were reported in the campus of Manipal University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X