ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೃಷ್ಣನಗರಿಯಲ್ಲಿಂದು ಕೊರೊನಾ ಸೋಂಕಿನಿಂದ 6 ಸಾವು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್‌ 06: ಜಿಲ್ಲೆಯಲ್ಲಿ ಇಂದು 217 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಇಂದು ಒಂದೇ ದಿನ ಆರು‌ ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5353ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದ ಈತನಕ ಜಿಲ್ಲೆಯಲ್ಲಿ 50 ಮಂದಿ ಸಾವನ್ನಪ್ಪಿದ್ದಾರೆ. ಇದೇವೇಳೆ ಇಂದು ಜಿಲ್ಲೆಯಲ್ಲಿ 85 ಮಂದಿ‌ ಡಿಸ್ಜಾರ್ಜ್ ಆಗಿದ್ದು, ಈತನಕ ಬಿಡುಗಡೆ ಆದವರ ಸಂಖ್ಯೆ ಒಟ್ಟು ‌3157 ಆಗಿದೆ. ಸದ್ಯ ಜಿಲ್ಲೆಯಲ್ಲಿ 2153 ಸಕ್ರಿಯ ಪ್ರಕರಣಗಳಿವೆ.

ಕೊರೊನಾದಿಂದ ಹೊರಬಂದ ಪುತ್ತಿಗೆ ಮಠಾಧೀಶ: ಕೆಎಂಸಿಯಿಂದ ಡಿಸ್ಚಾರ್ಜ್ಕೊರೊನಾದಿಂದ ಹೊರಬಂದ ಪುತ್ತಿಗೆ ಮಠಾಧೀಶ: ಕೆಎಂಸಿಯಿಂದ ಡಿಸ್ಚಾರ್ಜ್

ರಾಮನಗರದಲ್ಲಿ 50 ಕೊರೊನಾ ಪ್ರಕರಣಗಳು: ರಾಮನಗರ ಜಿಲ್ಲೆಯಲ್ಲಿ ಇಂದು 50 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 3, ಕನಕಪುರ ತಾಲ್ಲೂಕಿನಲ್ಲಿ 18, ರಾಮನಗರ ತಾಲ್ಲೂಕಿನಲ್ಲಿ 24 ಪ್ರಕರಣಗಳು ದೃಢಪಟ್ಟಿವೆ. ಇದೇ ಸಂದರ್ಭ, ಚಿಕಿತ್ಸೆ ಫಲಿಸದೆ ಕೊರೊನಾದಿಂದ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.

Udupi: 6 Deaths Reported Due To Coronavirus Today

ಒಂದು ವಾರದಿಂದ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಸಾವನ್ನಪ್ಪಿದ್ದಾರೆ. ಇಂದು 39 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 640 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 812 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ 18 ಮಂದಿ ಕೊರೋನಾಗೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1469ಕ್ಕೆ ಏರಿದೆ.

ಚಿತ್ರದುರ್ಗದಲ್ಲಿ ಕೊರೊನಾ ಸೋಂಕಿನಿಂದ ಸಾವು: ಚಿತ್ರದುರ್ಗದಲ್ಲಿ ಕೊರೊನಾ ಸೋಂಕಿನಿಂದ ಸಾವು: ಜಿಲ್ಲೆಯಲ್ಲಿ ಇಂದು 55 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 892ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್ ‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 8 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಕೊರೊನಾ ಸೋಂಕಿಗೆ 62 ವರ್ಷದ ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ. ಸೋಂಕಿತರ ಪೈಕಿ ಈಗಾಗಲೇ 480 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 398 ಸಕ್ರಿಯ ಪ್ರಕರಣಗಳು ಇವೆ.

English summary
217 coronavirus cases and 6 deaths reported in udupi district today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X