ಮಣಿಪಾಲ: ಗಾಂಜಾ ನಶೆಯಲ್ಲಿ ತೇಲಾಡುತ್ತಿದ್ದ 6 ವಿದ್ಯಾರ್ಥಿಗಳ ಬಂಧನ

Posted By:
Subscribe to Oneindia Kannada

ಉಡುಪಿ, ಸೆಪ್ಟೆಂಬರ್ 13 : ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳನ್ನು ಉಡುಪಿಯ ಮಣಿಪಾಲದಲ್ಲಿ ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಗಾಂಜಾ ಸೇವನೆಯ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಐಟಿಯ ಐವರು ವಿದ್ಯಾರ್ಥಿಗಳು ಸೇರಿದಂತೆ ಮಲೇಷಿಯಾ ಮೂಲದ ಓರ್ವ ಯುವತಿಯನ್ನು ವಶಕ್ಕೆ ಪಡೆದುಕೊಂಡು.

6 MIT students arrested for consuming ganja in Manipal

ಬಂಧಿತ 6 ಮಂದಿ ಗಾಂಜಾ ವ್ಯಸನಿಗಳ ವೈದ್ಯಕೀಯ ತಪಾಸಣೆ ನಡೆಸಲಸಗಿದ್ದು, ಮಾದಕ ದ್ರವ್ಯಗಳ ಸೇವನೆ ಸಾಭೀತಾಗಿದೆ.ಮಾದಕ ವಸ್ತುಗಳ ಸೇವನೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್ ನೇತೃತ್ವದಲ್ಲಿ ಮಣಿಪಾಲ ಪೊಲೀಸರ ಕಾರ್ಯಾಚರಣೆ ನಡೆಸಿದ್ದರು.

ಮಾದಕ ವಸ್ತು ಸೇವೆಯ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಲಾಗಿದೆ ಎಂದು ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್ ತಿಳಿಸಿದ್ದಾರೆ.

ಮಾದಕ ವಸ್ತುಗಳ ಸಾಗಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ ಅವರು ಮಾದಕ ವಸ್ತುಗಳು ಎಲ್ಲಿಂದ ಪೂರೈಕೆ ಆಗುತ್ತಿದೆ ಎಂಬ ಬಗ್ಗೆಯೂ ಪತ್ತೆ ಹಚ್ಚುತ್ತೇವೆ ಎಂದು ಮಾಧ್ಯಗಳಿಗೆ ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
6 MIT students arrested in Manipal for consuming Ganja were caught red hand by Udupi police. The students are said to be of MIT and among 6 one is said to be a girl of Malaysia.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ