Breaking: ಬೈಂದೂರು-ಕಾಲು ಸಂಕದಲ್ಲಿ ಜಾರಿ ಬಿದ್ದು ಹೊಳೆ ಪಾಲಾದ ವಿದ್ಯಾರ್ಥಿನಿ
ಶಿವಮೊಗ್ಗ, ಆಗಸ್ಟ್ 8: ಶಾಲೆ ಬಿಟ್ಟ ನಂತರ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಕಾಲು ಸಂಕದಿಂದ ಜಾರಿ ಬಿದ್ದು ಎರಡನೇ ತರಗತಿ ವಿದ್ಯಾರ್ಥಿನಿ, ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ನಡೆದಿದೆ.
ಕಾಲ್ತೋಡಿನ ಬೊಳಂಬಳ್ಳಿಯ ಮಕ್ಕಿಮನೆ ಮನೆ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7) ನೀರು ಪಾಲಾದ ಬಾಲಕಿ. ಶಾಲೆ ಬಿಟ್ಟ ಬಳಿಕ ಮನೆಗೆ ಬರುತ್ತಿದ್ದ ವೇಳೆಯಲ್ಲಿ ಬೀಜಮಕ್ಕಿ ಎಂಬಲ್ಲಿ ಹರಿಯುವ ಹೊಳೆಗೆ ಹಾಕಲಾಗಿದ್ದ ಕಾಲು ಸಂಕದಲ್ಲಿ ಬಾಲಕಿ ಸನ್ನಿಧಿ ಮತ್ತು ಆಕೆಯ ಸ್ನೇಹಿತರು ಹೊಳೆದಾಟುತ್ತಿದ್ದ ಸಂದರ್ಭದಲ್ಲಿ ಸನ್ನಿಧಿ ಕಾಲು ಜಾರಿ ಹೊಳೆಗೆ ಬಿದ್ದಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ.
ಸ್ಥಳೀಯರಿಗೆ ವಿಷಯ ತಿಳಿದು ತಕ್ಷಣ ಹುಡುಕಾಟ ಮಾಡಿದರೂ ಸನ್ನಿಧಿ ಪತ್ತೆಯಾಗಿಲ್ಲ. ಬೈಂದೂರು ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ಮಾಡಿದ್ದಾರೆ. ಬಾಲಕಿ ಮನೆಗೆ ಭೇಟಿ ಕೊಟ್ಟು ಶಾಸಕ ಸುಕುಮಾರ್ ಶೆಟ್ಟಿ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸಂಜೆಯವರೆಗೆ ಅಧಿಕಾರಿಗಳು ಹುಡುಕಾಟ ಮಾಡಿದ್ದು,ಸನ್ನಿಧಿಯ ಸುಳಿವು ಪತ್ತೆಯಾಗಿಲ್ಲ. ಮಳೆ ರಭಸವಾಗಿ ಸುರಿಯುತ್ತಿರೋದರಿಂದ ಮತ್ತು ಬೆಳಕಿನ ವ್ಯವಸ್ಥೆ ಇಲ್ಲದಿರುವುರಿಂದ ಸದ್ಯ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
Recommended Video
ಬೀಜಮಕ್ಕಿ ಪ್ರದೇಶದ ಈ ಹೊಳೆಗೆ ಸೇತುವೆ ಆಗಬೇಕೆಂದು ಜನ ಸುಮಾರು ವರ್ಷಗಳಿಂದ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೊಳೆಯ ಇನ್ನೊಂದು ಭಾಗದಲ್ಲಿ ನೂರಕ್ಕೂ ಅಧಿಕ ಕುಟುಂಬಗಳು ವಾಸವಿದ್ದು, ಮಳೆಗಾಲದಲ್ಲಿ ನೀರಿನ ಹರಿವು ಜಾಸ್ತಿ ಆದರೆ ಬೀಜಮಕ್ಕಿ ಪ್ರದೇಶ ದ್ವೀಪವಾಗುತ್ತದೆ. ಶಾಶ್ವತ ಸೇತುವೆ ನಿರ್ಮಾಣಕ್ಕೆ ಜನರು ಮನವಿಗಳ ಮೇಲೆ ಮನವಿ ನೀಡಿದರೂ ಯಾವುದೇ ಪ್ರಯೋಜನ ವಾಗದ ಹಿನ್ನಲೆಯಲ್ಲಿ ಜನರೇ ತಾತ್ಕಾಲಿಕ ವಾಗಿ ಕಾಲು ಸಂಕ ನಿರ್ಮಾಣ ಮಾಡಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications