ಉಡುಪಿಯಲ್ಲಿ ಮತ್ತೆ ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು!

ಉಡುಪಿ, ಜೂನ್ 1: ಉಡುಪಿಯಲ್ಲಿ ಸೋಮವಾರ 73 ಕೊರೊನಾ ವೈರಸ್ ಪಾಸಿಟಿವ್ ಕೇಸ್ ಬಂದಿದ್ದು, ಈ ಪೈಕಿ ನಾಲ್ವರು ಪೊಲೀಸರೂ ಸೇರಿದ್ದಾರೆ. ಇಂದಿನ ಪಾಸಿಟಿವ್ ಪ್ರಕರಣಗಳೊಂದಿಗೆ ಉಡುಪಿ ಜಿಲ್ಲೆಯ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ 260 ಕ್ಕೆ ಏರಿಕೆಯಾಗಿದೆ.

ಈ ಮೊದಲು ಉಡುಪಿ ಜಿಲ್ಲೆಯಲ್ಲಿ ನಾಲ್ವರು ಪೊಲೀಸರಿಗೆ ಸೋಂಕು ತಗುಲಿತ್ತು. ಚಿಕಿತ್ಸೆ ನಂತರ ಗುಣಮುಖರಾಗಿದ್ದರು. ಈ ಕುರಿತು ಮಾಹಿತಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಐದು ಮಂದಿ ಸೋಂಕಿತರ ಫೋನ್ ಸ್ವಿಚ್ ಆಫ್ ಆಗಿದ್ದು, ಅವರನ್ನು ಶೀಘ್ರ ಪತ್ತೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಇಂದಿನ ಸೋಂಕಿತರ ಪೈಕಿ 61 ಜನ ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ವಿದೇಶದಿಂದ ಬಂದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

73 New Coronavirus Infection Cases Reported In Udupi Today

ರೋಗದ ಗುಣಲಕ್ಷಣ ಇಲ್ಲದವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆ. ಸೋಂಕಿತ ಗರ್ಭಿಣಿ, ಮಕ್ಕಳು ಮತ್ತು ಹಿರಿಯರನ್ನು ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+