ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ To ಬಾಗಲಕೋಟೆ: ಯುವತಿಗೆ ಅಂಟಿದ್ದು ಹೇಗೆ ಕೊರೊನಾ?

|
Google Oneindia Kannada News

ಉಡುಪಿ, ಮೇ.06: ನೊವೆಲ್ ಕೊರೊನಾ ವೈರಸ್ ಸೋಂಕಿನ ಮೂಲವನ್ನು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ. ಉಡುಪಿಯಲ್ಲಿ ಯುವತಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕಿನ ಮೂಲ ಬಾಗಲಕೋಟೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪತ್ತೆ ಮಾಡಿದ್ದಾರೆ.

ಉಡುಪಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ತೆರಳಿದ ಯುವತಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಿಂದ ಉಡುಪಿ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೊರೊನಾದಿಂದ ಕಕ್ಕಾಬಿಕ್ಕಿಯಾದ ಕರುನಾಡಿನ ಕಂಪ್ಲೀಟ್ ಕಹಾನಿ! ಕೊರೊನಾದಿಂದ ಕಕ್ಕಾಬಿಕ್ಕಿಯಾದ ಕರುನಾಡಿನ ಕಂಪ್ಲೀಟ್ ಕಹಾನಿ!

ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಜೊತೆಗೆ ಈ ಸಂಬಂಧ ಚರ್ಚೆ ನಡೆಸಿದ್ದೇನೆ. ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಯುವತಿ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದಿದ್ದಾರೆ.

A Girl Infected With Coronavirus From Bagalkot

ಮಾರ್ಚ್.14ರಂದೇ ಬಾದಾಮಿಗೆ ತೆರಳಿದ್ದ ಯುವತಿ:

ಕಳೆದ ಮಾರ್ಚ್.14 ರಂದೇ ಯುವತಿಯು ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆ ಆಗಿರಲಿಲ್ಲ. ಇನ್ನು, ಅಕ್ಕಪಕ್ಕದ ಜಿಲ್ಲೆಗಳಲ್ಲೂ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಡುಪಿ ಜಿಲ್ಲೆಯಿಂದ ಯುವತಿಗೆ ಕೊರೊನಾ ವೈರಸ್ ಅಂಟಿಕೊಂಡಿಲ್ಲ. ಬದಲಿಗೆ ಆಕೆ ಬಾಗಲಕೋಟೆಯ ಸ್ಥಳೀಯ ಸಂಪರ್ಕದಿಂದ ಕೊರೊನಾ ಸೋಂಕು ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.

English summary
A Girl Infected With Coronavirus From Bagalkot. Udupi DC G. Jagadeesh Clarification About Infected Girl.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X