ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹೊಸ ನಿಯಮ

|
Google Oneindia Kannada News

ಉಡುಪಿ, ಸೆಪ್ಟೆಂಬರ್ 05; ಕೋವಿಡ್ ಹರಡುವಿಕೆ ತಡೆಗಟ್ಟಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಆಧಾರ್ ಕಾರ್ಡ್‌ ಮತ್ತು ಮೊಬೈಲ್ ನಂಬರ್ ಕಡ್ಡಾಯಗೊಳಿಸಲಾಗಿದೆ.

ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಶನಿವಾರದಿಂದಲೇ ಈ ಆದೇಶ ದೇವಾಲಯದಲ್ಲಿ ಜಾರಿಗೆ ಬಂದಿದೆ. ಅಲ್ಲದೇ ಕೇರಳದಿಂದ ಬರುವ ಭಕ್ತರು 72 ಗಂಟೆ ಮೊದಲಿನ ಆರ್‌. ಟಿ. ಪಿ. ಸಿ. ಆರ್. ವರದಿ ತರುವುದು ಕಡ್ಡಾಯ.

ಪ್ರತಿಷ್ಠೆಗೆ ಕಾರಣವಾದ ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಪ್ರತಿಷ್ಠೆಗೆ ಕಾರಣವಾದ ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ದೇವಾಲಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು.

ಕೊಲ್ಲೂರು ದೇವಾಲಯದಲ್ಲಿ ಕೋಟಿ-ಕೋಟಿ ಲೂಟಿ?ಕೊಲ್ಲೂರು ದೇವಾಲಯದಲ್ಲಿ ಕೋಟಿ-ಕೋಟಿ ಲೂಟಿ?

ಕೊಲ್ಲೂರು ದೇವಾಲಯಕ್ಕೆ ಕೇರಳದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

Kollur sri Mookambika temple

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಂಡಿದೆ. ವಾರಾಂತ್ಯದ ಕರ್ಫ್ಯೂವನ್ನು ಸಹ ಘೋಷಣೆ ಮಾಡಿದೆ. ಸೆಪ್ಟೆಂಬರ್ 3 ರಿಂದ 13ರ ತನಕ ವಾರಾಂತ್ಯದ ಕರ್ಫ್ಯೂ ಜಿಲ್ಲೆಯಲ್ಲಿ ಜಾರಿಯಲ್ಲಿರುತ್ತದೆ.

ಸಂಬಳ ಕೇಳಿದ ಸಿಬ್ಬಂದಿ ವಜಾ ಮಾಡಿದ ಉಡುಪಿ ಬಿ. ಆರ್. ಎಸ್ ಆಸ್ಪತ್ರೆ ಸಂಬಳ ಕೇಳಿದ ಸಿಬ್ಬಂದಿ ವಜಾ ಮಾಡಿದ ಉಡುಪಿ ಬಿ. ಆರ್. ಎಸ್ ಆಸ್ಪತ್ರೆ

ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆದೇಶದಲ್ಲಿ ಹೇಳಿದ್ದಾರೆ. ಕೇರಳದಲ್ಲಿ ಶನಿವಾರ ಸಹ 29 ಸಾವಿರ ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಕೇರಳದಿಂದ ಕೊಲ್ಲೂರಿಗೆ ಬರುವ ಭಕ್ತರಿಂದ ಕೋವಿಡ್ ಹರಡಬಾರದು ಎಂದು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ವಾರದಲ್ಲಿ ಕೋವಿಡ್ ಪಾಸಿಟಿವಿಟಿ ದರವನ್ನು ಶೇ 1ಕ್ಕಿಂತ ಕಡಿಮೆಗೊಳಿಸಲು ಯೋಜನೆ ರೂಪಿಸಲಾಗಿದೆ. ಕೋವಿಡ್ ಹರಡುವಿಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೇರಳದಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಗಳ ಮೊದಲ ಆರ್. ಟಿ. ಪಿ. ಸಿ. ಆರ್. ವರದಿ ತರಬೇಕು. ಆಗಮಿಸಿದವರನ್ನು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ ಪ್ರತಿದಿನ 9 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ, ಇದನ್ನು ಇನ್ನಷ್ಟು ಹೆಚ್ಚಿಸಬೇಕು. ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡುವ ಪ್ರಕ್ರಿಯೆ ನಡೆಯಬೇಕು ಎಂದು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಉತ್ತಮವಾಗಿ ನಡೆಯುತ್ತಿದೆ. ಈಗಾಗಲೇ ಒಟ್ಟು ಶೇ 79ರಷ್ಟು ಲಸಿಕೆ ನೀಡಿದ್ದು, ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ನೀಡಿ ಶೇ 100ರ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಮೂಲಕ ಸಾರ್ವಜನಿಕರಿಗೆ ಲಸಿಕೆ ವಿತರಣೆ ಮಾಡಿ. 100ಕ್ಕಿಂತ ಹೆಚ್ಚು ಅಸಂಘಟಿತ ವಲಯದ ಕಾರ್ಮಿಕರು ಇರುವ ಸ್ಥಳಕ್ಕೆ ತೆರಳಿ ಅವರಿಗೆ ಲಸಿಕೆ ನೀಡಿ ಎಂದು ಸೂಚಿಸಿದರು. ಸಭೆ, ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿರುವುದು, ಮಾಸ್ಕ್ ಧರಿಸದಿರುವುದು ಕಂಡು ಬರುತ್ತಿದೆ ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು.

ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಪಾಲನೆಯಾಗದಿದ್ದರೆ ಸಂಬಂಧಪಟ್ಟವರಿಗೆ ಸ್ಥಳದಲ್ಲಿಯೇ ದಂಡವಿಧಿಸಿ. ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸುವಂತೆ ಜಾಗೃತಿ ಅಭಿಯಾನ ಆಯೋಜನೆ ಮಾಡಿ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಸೊನ್ನೆ ತಲುಪುವ ತನಕ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯಿಂದ ಮಾಡಬೇಖು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

Recommended Video

ಖಾಸಗಿ ಉದ್ಯೋಗಿಗಳ PF ಖಾತೆ ಮೇಲೆ ಕೇಂದ್ರದ ಕಣ್ಣು | Oneindia Kannada

ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 97 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 74,348 ಆಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳು 1554.

English summary
Udupi district administration ordered that aadhaar card mandatory to visit Kollur sri Mookambika temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X