Get Updates
Get notified of breaking news, exclusive insights, and must-see stories!

ಬೆಂಗಳೂರಾಯ್ತು, ಈಗ ಮತ್ತೊಂದು ನಗರದಲ್ಲಿ ಕನ್ನಡಕ್ಕಿಲ್ಲ ಕಿಮ್ಮತ್ತು

ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಮತ್ತೊಂದು ಪ್ರಮುಖ ನಗರದಲ್ಲಿ ಕನ್ನಡಕ್ಕೆ ಕಿಮತ್ತು ನೀಡುತ್ತಿಲ್ಲ ಎನ್ನುವ ವಿಷಯ ಚರ್ಚೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದಿಂದ ನಾಮಫಲಕಗಳಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎನ್ನುವ ಕೂಗಿನ ನಡುವೆಯೂ ಕರ್ನಾಟಕದಲ್ಲೇ ಕನ್ನಡಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನ ವಾಣಿಜ್ಯ ಉದ್ದಿಮೆಗಳಲ್ಲಿ (ವಾಣಿಜ್ಯ ಮಳಿಗೆ), ಅಂಗಡಿಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ನಿರಂತರ ಹೋರಾಟಗಳು ನಡೆದಿದ್ದವು. ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದವು. ಕನ್ನಡಪರ ಹೋರಾಟಗಾರರ ಪ್ರತಿಭಟನೆ ಹಾಗೂ ಒತ್ತಾಯಕ್ಕೆ ಮಣಿದ ಸರ್ಕಾರವೂ ಸಹ ಕನ್ನಡಕ್ಕೆ ಆದ್ಯತೆ ನೀಡುವ ವಿಷಯಕ್ಕೆ ಕಾನೂನಿನ ಬೆಂಬಲವನ್ನೂ ನೀಡಿದೆ.

After Bengaluru now Kannada has no place in this famous city of Karnataka

ಇದೀಗ ಕರಾವಳಿ ಜಿಲ್ಲೆಯ ಉಡುಪಿಯಲ್ಲೂ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದೆ ಇದ್ದರೆ, ಹೋರಾಟ ಮಾಡುವುದಾಗಿ ಕನ್ನಡ ರಕ್ಷಣಾ ವೇದಿಕೆ ಈಗಾಗಲೇ ಎಚ್ಚರಿಕೆ ನೀಡಿದೆ. ಉಡುಪಿ ನಗರದ ಹಲವು ಭಾಗದಲ್ಲಿನ ನಾಮಫಲಕಗಳಲ್ಲಿ ಅನ್ಯ ಭಾಷೆಯನ್ನು ಬಳಸಲಾಗಿದ್ದು. ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂದು ಕರವೇ ಆರೋಪಿಸಿದೆ.

ಉಡುಪಿ ಜಿಲ್ಲೆಯ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿನ ವಾಣಿಜ್ಯ ಮಳಿಗೆಗಳು, ಹೋಟೆಲ್‌, ಆಸ್ಪತ್ರೆ, ಶಿಕ್ಷಣ ಸಂಸ್ಥೆ ಹಾಗೂ ಜಾಹೀರಾತು ಫಲಕ ಸೇರಿದಂತೆ ಹಲವು ಕಡೆಗಳಲ್ಲಿ ಸರ್ಕಾರದ ನಿಯಮವನ್ನು ಉಲ್ಲಂಘಿಸಲಾಗಿದೆ. ಇದನ್ನು ತಪ್ಪಿಸಬೇಕು. ರಾಜ್ಯ ಸರ್ಕಾರದ ಮಂಡಿಸಿರುವ ಕಾನೂನಿ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರವೇ ಆಗ್ರಹಿಸಿದೆ.

ರಾಜ್ಯ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ ವಿಧೇಯಕ)2024 ಅನ್ನು ಮಂಡಿಸಿದೆ. ಈ ವಿಧೇಯಕದ ಅನ್ವಯ ನಾಮಫಲಕಗಳಲ್ಲಿ ಶೇ60ರಷ್ಟು ಕನ್ನಡವನ್ನು ಅಳವಡಿಸಿಕೊಳ್ಳಬೇಕು. ಆದರೆ, ಉಡುಪಿಯಲ್ಲಿ ಈ ನಿಯವನ್ನು ಉಲ್ಲಂಘಿಸಿ ಅನ್ಯಭಾಷೆಗಳನ್ನು ಬಳಸಲಾಗುತ್ತಿದೆ. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಬರೋಬ್ಬರಿ ಹತ್ತು ತಿಂಗಳುಗಳೇ ಕಳೆದಿವೆ. ಆದರೆ, ಹತ್ತು ತಿಂಗಳಾದರೂ ಉಡುಪಿಯಲ್ಲಿ ಇನ್ನೂ ಕನ್ನಡ ನಾಮಫಲಕಗಳನ್ನು ಅಳವಡಿಸಿಲ್ಲ. ಇದೇ ಮುಂದುವರಿದರೆ, ಅನ್ಯಭಾಷೆಯಲ್ಲಿ ಅಳವಡಿಸಿರುವ ನಾಮಫಲಕಗಳಿಗೆ ಮಸಿ ಬಳಿಯುವುದಾಗಿ ಕರವೇ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿಗೆ ಸೀಮಿತವಾಯ್ತೇ: ನಿರಂತರ ಹೋರಾಟದ ನಂತರ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೆಲವು ಕಡೆ ಬೆರಳೆಣಿಕೆಯ ಜಾಗದಲ್ಲಿ ಅನ್ಯಭಾಷೆಯ ಬೋರ್ಡ್‌ಗಳು ಇವೆ. ಆದರೆ, ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ಆರೋಪ ರಾಜ್ಯದ ವಿವಿಧ ಪ್ರಮುಖ ನಗರಗಳಲ್ಲಿ ಕೇಳಿ ಬಂದಿದೆ.

ಬೆಳಗಾವಿ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ಅಂಗಡಿಗಳಲ್ಲಿ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ದೂರುಗಳು ಇವೆ. ಹೀಗಾಗಿ, ರಾಜ್ಯದ ಎಲ್ಲ ಭಾಗದಲ್ಲೂ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಆಗ್ರಹಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+