ನವೆಂಬರ್ 21ರ ಕುಮಟಾ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ

Posted By:
Subscribe to Oneindia Kannada
   ನವೆಂಬರ್ 21 ಕ್ಕೆ ಕುಮಟಾ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ

   ಉಡುಪಿ, ಅಕ್ಟೋಬರ್ 20: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ರಾಜ್ಯದ ಮೀನುಗಾರರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಮೀನುಗಾರರ ಸಮಾವೇಶವನ್ನು ಆಯೋಜಿಸಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

   ಲಿಂಗಾಯತರಾಯ್ತು, ಈಗ ಮೀನುಗಾರರ ಮತಬುಟ್ಟಿಗೆ ಕಾಂಗ್ರೆಸ್ ಗಾಳ

   ಇದೇ ನವೆಂಬರ್ 21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಣಕಿಯಲ್ಲಿ 'ರಾಜ್ಯ ಮೀನುಗಾರರ ಕಾಂಗ್ರೆಸ್' ಆಯೋಜಿಸಿರುವ ಬೃಹತ್ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

   AICC vice-president Rahul Gandhi will address fisherman rally in Kumata on Nov 21th

   ಈ ಕುರಿತು ಉಡುಪಿಯಲ್ಲಿ ಮಾಹಿತಿ ನೀಡಿದ ರಾಜ್ಯ ಮೀನುಗಾರರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಯು. ಆರ್. ಸಭಾಪತಿ ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

   ಈ ಸಮಾವೇಶದಲ್ಲಿ ಕರಾವಳಿಯ ಉತ್ತರ ಕನ್ನಡ , ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1 ಲಕ್ಷಕ್ಕೂ ಮಿಕ್ಕಿ ಮೀನುಗಾರರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

   ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಖಾತೆ ತೆರೆಯಬೇಕು. ಮೀನುಗಾರ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕು. ಹಾಗೂ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   All India Fishermen Congress Karnataka has decided to organize a state level massive fishermen’s rally at Kumata in Uttara Kannada district. The Rally will be addressed by AICC vice-president Rahul Gandhi on November 21th.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ