ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಾಪುರದಲ್ಲಿ ಅಮೋನಿಯಾ ಸೋರಿಕೆಯಿಂದ ಅಸ್ವಸ್ಥರಾದ 67 ಕಾರ್ಮಿಕರು; ತನಿಖೆಗೆ ಡಿಸಿ ಆದೇಶ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್ 13: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಿಂದ ಹಲವು ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ತನಿಖೆಗೆ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಿನ್ನೆ ಮಲ್ಪೆ ಮೆರೈನ್ ಫಿಶ್ ಸ್ಟೋರೇಜ್ ನಲ್ಲಿ ಅಮೋನಿಯಾ ಲಿಕ್ವಿಡ್ ಸೋರಿಕೆಯಾಗಿ ಅರವತ್ತೇಳು ಮಹಿಳಾ ಕಾರ್ಮಿಕರು ಹಾಗೂ ಏಳು ಪುರುಷ ಕಾರ್ಮಿಕರು ಅಸ್ವಸ್ಥಗೊಂಡಿದ್ದರು. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅಮೋನಿಯಾ ಲಿಕ್ವಿಡ್ ಬೆರೆತ ಗಾಳಿ ಸೇವಿಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥರಾಗಿದ್ದರು. ಅಮೋನಿಯಾ ಲಿಕ್ವಿಡ್ ಇರಿಸಲಾಗಿದ್ದ ಚೇಂಬರ್ ನ ಪೈಪ್ ಲೀಕ್ ಆದ ಪರಿಣಾಮ ಈ ಘಟನೆ ನಡೆದಿತ್ತು. ಉಸಿರಾಟದ ಗಂಭೀರ ತೊಂದರೆ ಅನುಭವಿಸುತ್ತಿದ್ದ 74 ಕಾರ್ಮಿಕರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 ಪುನರ್ವಸತಿ ಕೇಂದ್ರದಲ್ಲಿ ವಿಷಾಹಾರ ಸೇವನೆ: 30 ನಿರಾಶ್ರಿತರು ಅಸ್ವಸ್ಥ ಪುನರ್ವಸತಿ ಕೇಂದ್ರದಲ್ಲಿ ವಿಷಾಹಾರ ಸೇವನೆ: 30 ನಿರಾಶ್ರಿತರು ಅಸ್ವಸ್ಥ

ಇದೀಗ ಈ ಘಟನೆಯ ಸಮಗ್ರ ತನಿಖೆಗೆ ಉಡುಪಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶ ನೀಡಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆ ಕಂಡ್ಲೂರು ಪೊಲೀಸರು ಆಗಮಿಸಿ ಘಟನೆಯ ಕಾರಣಗಳನ್ನು ಪರಿಶೀಲನೆ ನಡೆಸಿದ್ದಾರೆ.

Ammonia Leak At The Fish Processing Plant In Kundapur

ಈ ಕಾರ್ಖಾನೆ ಆರಂಭಕ್ಕೂ ಮುನ್ನ ಮತ್ತು ಬಳಿಕ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದವು. ಕಾರ್ಮಿಕರಿಗೆ ಸಾಕಷ್ಟು ಸುರಕ್ಷತಾ ಕ್ರಮಗಳು ಇಲ್ಲಿಲ್ಲ ಎಂಬ ಆರೋಪಗಳೂ ಕೇಳಿ ಬಂದಿದ್ದವು. ಇದಕ್ಕೆ ಪೂರಕವೆಂಬಂತೆ ಈ ಘಟನೆ ನಡೆದಿದೆ. ಉದ್ಯೋಗದ ಆಸೆಗೆ ಒಂದಿಷ್ಟು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿರುವಾಗಲೇ ಈ ಘಟನೆ ನಡೆದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕುಂದಾಪುರ ಹೆಮ್ಮಾಡಿಯಲ್ಲಿ ನಡೆದ ಈ ದುರ್ಘಟನೆಯಿಂದ ಜಿಲ್ಲೆಯ ಇತರೆ ಮೀನು ಸಂಸ್ಕರಣಾ ಘಟಕಗಳ ಸುರಕ್ಷತೆಯ ಬಗ್ಗೆಯೂ ಸಾರ್ವಜನಿಕರಲ್ಲಿ ಅನುಮಾನಗಳು ಮೂಡತೊಡಗಿವೆ.

 ಕಾರ್ಮಿಕ ಪರವಾನಗಿ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ? ಕಾರ್ಮಿಕ ಪರವಾನಗಿ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

ಇದೀಗ ಉಡುಪಿ ಜಿಲ್ಲಾಧಿಕಾರಿಗಳು ಅಮೋನಿಯಾ ಸೋರಿಕೆ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದು, ತಪ್ಪು ಕಂಡು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

English summary
The Udupi District Collector has ordered an inquiry into the incident where a large number of laborers became ill due to ammonia leak at the fish processing plant in Kundapur taluk in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X