ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ-ಚಿಕ್ಕಮಗಳೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಕಣಕ್ಕೆ

|
Google Oneindia Kannada News

ಉಡುಪಿ, ಮಾರ್ಚ್ 26:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ಬಂಡಾಯದ ಬಿಸಿ ತಟ್ಟಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅಮೃತ್ ಶೆಣೈ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಿನ್ನೆ (ಮಾ.26) ನಾಮಪತ್ರ ಸಲ್ಲಿಸಿದ್ದಾರೆ.ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಮೈತ್ರಿ ಹೊಂದಾಣಿಕೆ ನಿಯಮದಡಿ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು.

ಕೈ, ತೆನೆ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್ಕೈ, ತೆನೆ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್

ಹೈಕಮಾಂಡ್ ನ ಈ ನಿರ್ಧಾರದ ವಿರುದ್ಧ ಅಮೃತ್ ಶೆಣೈ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಂತಿಮ ಕ್ಷಣದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡರು. ತನ್ನ ಬಂಬಲಿಗರೊಂದಿಗೆ ತೆರಳಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು.

Amrith Shenoy contest as Independent candidate

ಈ ಸಂದರ್ಭದಲ್ಲಿ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ ಡಿಸೋಜ ಹಾಜರಿದ್ದರು.

 ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷ ತೊರೆಯಲು ನಿರ್ಧಾರ ? ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷ ತೊರೆಯಲು ನಿರ್ಧಾರ ?

ನಾಮ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಮೃತ್ ಶೆಣೈ , ನಾನು ಕೂಡ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ನನಗೆ ಅವಕಾಶ ಸಿಗಲಿಲ್ಲ. ಆದುದರಿಂದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ವಿರೋಧಿಸಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

English summary
AICC member Amrith Shenoy field the nomination as independent candidate to Udupi-Chikkamagaluru Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X