ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷ ತೊರೆಯಲು ನಿರ್ಧಾರ ?

ಉಡುಪಿ, ಮಾರ್ಚ್ 23: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಆಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಘೋಷಣೆಯಾಗುತ್ತಿದ್ದಂತೆ ಉಡುಪಿ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯತ್ವಕ್ಕೆ ಅಮೃತ್ ಶೆಣೈ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಅಮೃತ್ ಶೆಣೈ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲು ಅಮೃತ್ ಶೆಣೈ ತಯಾರಿ ನಡೆಸಿದ್ದಾರೆ.

Amrith Shenoy decided to resign congress?

ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಅಮೃತ್ ಶೆಣೈ ಇಂದು ಸಂಜೆ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷದ ಹೈಕಮಾಂಡ್ ನಡೆಯಿಂದ ಅಸಮಾಧಾನ ಗೊಂಡಿರುವ ಅಮೃತ್ ಶೆಣೈ ಅವರ ಮನವೊಲಿಸಲು ಮಾಜಿ ಸಚಿವ ಹಾಗು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಹಿತ ಕೈ ಮುಖಂಡರು ಭಾರೀ ಕಸರತ್ತು ನಡೆಸಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+