ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮಮಂದಿರಕ್ಕೆ ಅಂಜನಾದ್ರಿ ಕಲ್ಲು: ಪೇಜಾವರ ಶ್ರೀಗಳ ಮೂಲಕ ಅಯೋಧ್ಯೆಗೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜುಲೈ 31: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟಲಾಗುತ್ತಿದ್ದು, ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯಲಿದೆ. ರಾಮಮಂದಿರ ಶಿಲಾನ್ಯಾಸದ ಹಿನ್ನೆಲೆಯಲ್ಲಿ ದೇಶವ್ಯಾಪಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದೆ.

ಇಡೀ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು ನೀರಿನ ಸಂಗ್ರಹ ಒಂದೆಡೆ ನಡೆಯುತ್ತಿದ್ದರೆ, ನಮ್ಮ ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆಯನ್ನು ಮೆರವಣಿಗೆ ಮೂಲಕ ತಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಒಪ್ಪಿಸಲಾಗಿದೆ.

ಕರಾವಳಿಯ ನಾಗಾರಾಧನೆ ಮೇಲೆ ಕೊರೊನಾ ಕರಿಛಾಯೆಕರಾವಳಿಯ ನಾಗಾರಾಧನೆ ಮೇಲೆ ಕೊರೊನಾ ಕರಿಛಾಯೆ

ಶ್ರೀರಾಮ ಸೇನೆಯ ರಾಜ್ಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮೆರವಣಿಗೆಯ ಮೂಲಕ ಶಿಲೆಯನ್ನು ಹೊತ್ತು ತಂದರು. ಬ್ರಹ್ಮಾವರ ತಾಲೂಕು ನೀಲಾವರ ಮಠದ ಆವರಣದಲ್ಲಿ ನಡೆದ ಧಾರ್ಮಿಕ ಆಚರಣೆಯ ನಂತರ ಶಿಲೆಯನ್ನು ಪೇಜಾವರ ಸ್ವಾಮೀಜಿ ಅವರಿಗೆ ಹಸ್ತಾಂತರ ಮಾಡಲಾಯಿತು. ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಶಿಲೆಗೆ ಅಭಿಷೇಕ ನಡೆಸಿ, ಆರತಿ ಮಾಡಿ ಸ್ವೀಕಾರ ಮಾಡಿದರು. ಅಯೋಧ್ಯೆಯ ರಾಮಮಂದಿರದ ಶಿಲಾನ್ಯಾಸಕ್ಕೂ ಮುನ್ನ ಈ ಶಿಲೆಯನ್ನು ಅಯೋಧ್ಯೆಗೆ ತಲುಪಿಸುವುದಾಗಿ ಭರವಸೆ ನೀಡಿದರು.

Anjanadri Hill Rock Handed Over To The Pejawar Shri By Srirama Sena

ಹನುಮಂತ ಶ್ರೀರಾಮನ ಪರಮಭಕ್ತ. ಆತ ಅವತರಿಸಿದ ಅಂಜನಾದ್ರಿ ಬೆಟ್ಟದ ಶಿಲೆಯನ್ನು ರಾಮ ಮಂದಿರದ ಶಿಲಾನ್ಯಾಸಕ್ಕೆ ಬಳಸಲಾಗುತ್ತದೆ. ಶಿಲೆಯನ್ನು ಶಿಲಾನ್ಯಾಸಕ್ಕೆ ಅರ್ಪಿಸುವ ಮೂಲಕ ಕರ್ನಾಟಕಕ್ಕೂ ರಾಮಮಂದಿರಕ್ಕೂ ಭಾವನಾತ್ಮಕ ಸಂಬಂಧ ಬೆಸೆದಂತಾಗುತ್ತದೆ. ವಿಶ್ವೇಶ ತೀರ್ಥ ಶ್ರೀಗಳಿಗೆ ಅಂಜನಾದ್ರಿ ಬೆಟ್ಟದಲ್ಲಿ ಸನ್ಯಾಸತ್ವ ದೀಕ್ಷೆ ಕೊಡಲಾಗಿತ್ತು ಎಂಬುದು ವಿಶೇಷ.

Anjanadri Hill Rock Handed Over To The Pejawar Shri By Srirama Sena

ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮಾತನಾಡಿ, ಪೇಜಾವರ ಶ್ರೀಗಳು ರಾಮ ಮಂದಿರದ ದೊಡ್ಡ ಹೋರಾಟಗಾರರು. ಅವರ ಶಿಷ್ಯ ಈಗ ರಾಮ ಮಂದಿರದ ಟ್ರಸ್ಟಿಯಾಗಿದ್ದಾರೆ, ಅವರ ಮೂಲಕ ಶಿಲೆಯನ್ನು ರಾಮಮಂದಿರಕ್ಕೆ ಅರ್ಪಿಸುತ್ತಿದ್ದೇವೆ. ಕೋಟಿ ಕೋಟಿ ಭಕ್ತರ ಕನಸು ನನಸಾಗುತ್ತಿದೆ ಎಂದರು.

English summary
Ram Mandira is being built at Ramajanmabhumi Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X