ಉಡುಪಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಎಎಸ್ಐ ಆತ್ಮಹತ್ಯೆ
ಉಡುಪಿ, ಮೇ 29: ಪೊಲೀಸ್ ಠಾಣೆಯ ಸಮೀಪದಲ್ಲೇ ಸಶಸ್ತ್ರ ಮೀಸಲು ಪಡೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಅಮಾಸೆಬೈಲಿನಲ್ಲಿ ನಡೆದಿದೆ.
ಅಮಾಸೆಬೈಲು ಪೊಲೀಸ್ ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮಲ್ಲಿಕಾರ್ಜುನ್ ಗುಬ್ಬಿ (56) ಇಂದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ಇವರು ಮೂಲತಃ ಕಲಬುರಗಿಯ ನೌರುಗಂಜ್ ನಿವಾಸಿಯಾಗಿದ್ದು, ಮೇ 16 ರಂದು ನಕ್ಸಲ್ ಪೀಡಿತ ಅಮಾಸೆಬೈಲು ಪೊಲೀಸ್ ಠಾಣೆಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು.

ಮೂರು ತಿಂಗಳ ಹಿಂದೆ ಕೊಪ್ಪಳದ ಮುನಿರಾಬಾದ್ ಗೆ ವರ್ಗಾವಣೆಗೊಂಡಿದ್ದರು. ಶನಿವಾರ ಮಲ್ಲಿಕಾರ್ಜುನ್ ಮುನಿರಾಬಾದ್ ಗೆ ತೆರಳುವವರಿದ್ದರು. ಇವರು ಅನಾರೋಗ್ಯದ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.












Click it and Unblock the Notifications