ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಶಿಕ್ಷಕಿ ಮೇಲೆ ಹಲ್ಲೆ; "zero tolerance" ಬಗ್ಗೆ ಹೇಳಿದ ಸುರೇಶ್ ಕುಮಾರ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 14: ಬೈಂದೂರು ತಾಲೂಕು ಉಪ್ಪುಂದ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸಿ ಕಠಿಣ ಕ್ರಮಕ್ಕೆ ಮುಂದಾಗಲು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಉಪ್ಪುಂದದ ಸರ್ಕಾರಿ ಹಿರಿಯ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಮತಾ ಎಂಬುವವರ ಮೇಲೆ ಅದೇ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಅವರು ಹಲ್ಲೆಮಾಡಿ, ಜೀವ ಬೆದರಿಕೆ ಹಾಕಿದ್ದರು. ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮಕ್ಕಳಿಗೆ ನೀರು ಕುಡಿಯಲು 'ವಾಟರ್ ಬೆಲ್' ವಿರಾಮ: ಕೇರಳದ ಯೋಜನೆ ರಾಜ್ಯದ ಶಾಲೆಗಳಲ್ಲಿಯೂ ಜಾರಿ?ಮಕ್ಕಳಿಗೆ ನೀರು ಕುಡಿಯಲು 'ವಾಟರ್ ಬೆಲ್' ವಿರಾಮ: ಕೇರಳದ ಯೋಜನೆ ರಾಜ್ಯದ ಶಾಲೆಗಳಲ್ಲಿಯೂ ಜಾರಿ?

Assault On Teacher Suresh Kumar Orders Dismissal Of SDMC President In Udupi

ಈ ಕುರಿತಂತೆ ಶಿಕ್ಷಕಿಯೊಂದಿಗೆ ನೇರ ಮಾತನಾಡಿ‌ ಸಾಂತ್ವನ ಹೇಳಿದ ಬಳಿಕ ಸಚಿವ ಸುರೇಶ್‌ಕುಮಾರ್ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸ್ಪಷ್ಟ ಸೂಚನೆ‌ ನೀಡಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಸಚಿವರು ತಾವು ಸ್ಥಳೀಯ ಶಾಸಕರಿಗೂ ಈ ಬಗ್ಗೆ ತಿಳಿಸಿದ್ದು, ಇಂತಹ ಪ್ರಕರಣಗಳಲ್ಲಿ zero tolerance ಇರಬೇಕೆಂದು ಅಭಿಪ್ರಾಯಿಸಿದ್ದಾರೆ.

English summary
Education Minister Suresh Kumar has ordered to dismiss SDMC president of the Byndoor taluk Uppunda government Urdu school in udupi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X