ಆಟೋ ಪ್ರಯಾಣ ದರ ಹೆಚ್ಚಳ; ಕನಿಷ್ಠ ದರ 30 ರೂ.

ಉಡುಪಿ, ಫೆಬ್ರವರಿ 07 : ಉಡುಪಿ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗಿದೆ. 1.5 ಕಿ.ಮೀ. ವರೆಗಿನ ಈಗಿನ ಕನಿಷ್ಠ ದರವನ್ನು ರೂ. 25ರಿಂದ 30ಕ್ಕೆ ಹೆಚ್ಚಿಸಲು ಒಪ್ಪಿಗೆ ನೀಡಲಾಗಿದೆ. ಏಪ್ರಿಲ್‌ 1ರಿಂದ ನೂತನ ದರ ಜಾರಿಗೆ ಬರಲಿದೆ.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತ ಸಭೆ ನಡೆಯಿತು. ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಟೋ ಪ್ರಯಾಣ ದರ ಹಚ್ಚಳ ಮಾಡಲು ತೀರ್ಮಾನಿಸಲಾಯಿತು.

ಜಿಲ್ಲೆಯ ಆಟೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. 1.5 ಕಿ.ಮೀ. ವರೆಗಿನ ಈಗಿನ ಕನಿಷ್ಠ ದರ ರೂ. 25 ರಿಂದ ರೂ.30 ಕ್ಕೆ ಹೆಚ್ಚಿಸಲು ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಿದರು. ಹೆಚ್ಚಳವಾದ ದರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.

Auto Fare Hiked In Udupi District

ಉಡುಪಿ ಜಿಲ್ಲೆಯಲ್ಲಿ 2014ರ ಬಳಿಕ ಆಟೋಗಳ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿರಲಿಲ್ಲ. ವಾಹನದ ವಿಮೆ, ಬಿಡಿಭಾಗ ದರ ಹೆಚ್ಚಳವಾಗಿದ್ದು ಪ್ರಯಾಣದ ದರವನ್ನು ಹೆಚ್ಚಿಸುವಂತೆ ಆಟೋ ಚಾಲಕರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದವು.

ಕನಿಷ್ಠ ಪ್ರಯಾಣ ದರವನ್ನು 30 ರೂ.ಗಳಿಗೆ ಹೆಚ್ಚಳ ಮಾಡಲು ಒಪ್ಪಿಗೆ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲಾ ಆಟೋಗಳಲ್ಲಿ ಮೀಟರ್ ಅಳವಡಿಸಿ, ಆ ಪ್ರಕಾರವೇ ಪ್ರಯಾಣಿಕರಿಂದ ದರ ಪಡೆಯುಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆಟೋ ಚಾಲಕರು ಸಾರ್ವಜನಿರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ ಹಾಗೂ ಕಡ್ಡಾಯವಾಗಿ ಸಂಚಾರಿ ನಿಯಮಗಳ ಪಾಲನೆ ಮಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ದ ದಿಕ್ಕಿನಿಂದ ಬರಬೇಡಿ, ಆಟೋಗಳಲ್ಲಿ ನಿಗಧಿತ ಸಂಖ್ಯೆಯ ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಿರಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+