B.Ramanath Rai: ಕಾಂಗ್ರೆಸ್‌ ಹಿರಿಯ ನಾಯಕ ಬಿ.ರಮಾನಾಥ್ ರೈ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ

B.Ramanath Rai: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ರಮಾನಾಥ ರೈ ಅವರು ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೀಡಾಗಿದೆ. ಈ ಘಟನೆ ಭಾನುವಾರ (ಸಪ್ಟೆಂಬರ್ 20) ಕಾರ್ಕಳ - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಮಾನಾಥ ರೈ ಸೇರಿದಂತೆ ಸಹಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣವೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.

B Ramanath Rai of Congress Senior Leader Injured in Car Accident on Karkala-Moodbidri Highway

ವೈದ್ಯಕೀಯ ವರದಿ ಇನ್ನೂ ಹೊರಬರಬೇಕಿದೆ

ಇನ್ನೂ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯಕೀಯ ವರದಿ ಇನ್ನೂ ಹೊರಬರಬೇಕಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಾಣೂರು ಜಂಕ್ಷನ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಹರಸಾಹಸಪಟ್ಟು ಸ್ಥಳೀಯರು ಹೊರಕರೆತಂದಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಹಾಗೂ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

ರಾಮನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಧ್ಯಾಹ್ನ 3:30 ಗಂಟೆ ಸುಮಾರಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಜಂಕ್ಷನ್‌ ಬಳಿ ಅಪಘಾತಕ್ಕೆ ಒಳಗಾಯಿತು. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+