ಉಡುಪಿಯಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ಸಜೀವ ದಹನ
ಉಡುಪಿ, ಜುಲೈ 15: ಉಡುಪಿ ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಉಡುಪಿ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ರಮಾನಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ರಮಾನಂದ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಮನೆಯೊಳಗೆ ಬೆಂಕಿಯಲ್ಲಿ ಸಿಲುಕಿಕೊಂಡಿದ್ದವರ ರಕ್ಷಣೆ ಮಾಡಲಾಗಿದೆ. ಮನೆಗೆ ಬೆಂಕಿ ತಗುಲಿದ ಕಾರಣ ಈವರೆಗೂ ತಿಳಿದು ಬಂದಿಲ್ಲ.
ಕಡಬ: ಭಾರೀ ಸುಂಟರಗಾಳಿಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ
ಮಂಗಳೂರು: ಭಾರೀ ಸುಂಟರಗಾಳಿಗೆ ಶಾಲೆಯ ಹಂಚುಗಳು ಹಾರಿ ಹೋದ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದಿದೆ. ಕಡಬ ತಾಲೂಕಿನ ವಿವಿಧೆಡೆ ಗಾಳಿ ಮಳೆಯಾಗಿದ್ದು, ಸುಂಟರಗಾಳಿಗೆ ಶಾಲೆಯ ಎಲ್ಲಾ ಕೊಠಡಿಯ ಹಂಚುಗಳು ಹಾರಿ ಕೆಳಗೆ ಬಿದ್ದಿದೆ.

ಶಾಲೆಗೆ ರಜೆ ಇದ್ದ ಹಿನ್ನಲೆಯಲ್ಲಿ ಸಂಭವಿಸಬಹುದಾದ ಭಾರೀ ದುರಂತವೊಂದು ತಪ್ಪಿದೆ. ಇದೀಗ ಮಳೆಯಿಂದ ಬಲ್ಯ ಗ್ರಾಮದ ಸ.ಹಿ.ಪ್ರಾ.ಶಾಲೆ ಸಂಪೂರ್ಣ ಸೋರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ.
ಉಡುಪಿ: ಭಾರೀ ಮಳೆಗೆ ಅಡುಗೆ ಕೋಣೆ ಗೋಡೆ ಕುಸಿತ
ಉಡುಪಿ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಶಾಲೆಯ ಅಡುಗೆಕೋಣೆ ಗೋಡೆ ಕುಸಿದ ಘಟನೆ ಉಡುಪಿ ನಗರದ ದೊಡ್ಡಣ್ಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಭಾರೀ ಮಳೆಗೆ ಶಾಲೆಯ ಅಡುಗೆ ಕೋಣೆಯ ಗೋಡೆ ಕುಸಿತಗೊಂಡಿದೆ. ಗೋಡೆ ಕುಸಿತದಿಂದಾಗಿ ಅಡುಗೆ ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ರಾತ್ರಿ ವೇಳೆ ಗೋಡೆ ಕುಸಿದ ಹಿನ್ನಲೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications