ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಭಾರೀ ಮಳೆ; ಡಿಸಿ ಜೊತೆ ಸಚಿವ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್‌ 06: ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಅನುಭವಿಸಿದ ಜನರಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತಕ್ಷಣವೇ ಪರಿಹಾರ ವಿತರಿಸುವಂತೆ ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Recommended Video

ರಕ್ಷಣೆಗೆಂದು ಮರದ ಕೆಳಗೆ ನಿಂತವರು ಅದೇ ಮರ ಬಿದ್ದು ಸಾವು! | Oneindia Kannada

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಮಳೆ ಹಾನಿ ಹಾಗೂ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಬೊಮ್ಮಾಯಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ: ಚರಂಡಿಗೆ ಬಿದ್ದು ಮಹಿಳೆ ಸಾವುಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ: ಚರಂಡಿಗೆ ಬಿದ್ದು ಮಹಿಳೆ ಸಾವು

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆಗೊಳಿಸಿ. ಮನೆ ಹಾನಿಯ ವಿವರ ಕುರಿತು ರಾಜೀವ ಗಾಂಧಿ ವಸತಿ ನಿಗಮದ ಪೋರ್ಟಲ್ ನಲ್ಲಿ ಹಾನಿಯಾದ ದಿನವೇ ಅಪ್‌ಲೋಡ್ ಮಾಡಿ, ಕೃಷಿ ಬೆಳೆ ಹಾನಿ ಪರಿಶೀಲಿಸಲು ತಾಲೂಕುವಾರು ಕಂದಾಯ, ಕೃಷಿ ಮತ್ತು ಪಿಡಿಓ ಒಳಗೊಂಡ ತಂಡಗಳನ್ನು ರಚಿಸಿ ಎಂದು ತಿಳಿಸಿದರು.

Udupi; Basavaraj Bommai Video Conference Regarding Damage By Rain In District

ಹಾನಿಯ ಸಮೀಕ್ಷೆಯನ್ನು ಶೀಘ್ರದಲ್ಲಿ ನಡೆಸಿ ವರದಿ ಪಡೆದು ಪರಿಹಾರ ನೀಡಲು ಕ್ರಮ ಕೈಗೊಂಡು ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ, ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿದ್ದಲ್ಲಿ ಅಲ್ಲಿನ ಜನತೆಗೆ ಈ ತಿಂಗಳ ಪಡಿತರದ ಜೊತೆಗೆ ಮುಂದಿನ ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಿಸುವಂತೆ ಸೂಚಿಸಿದರು.

116 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಅದಕ್ಕೆ ಪರಿಹಾರ ವಿತರಣೆ ಮಾಡಲಾಗಿದೆ. ವಿಪತ್ತು ಪರಿಹಾರ ನಿಧಿಯಲ್ಲಿ ಹಣದ ಕೊರತೆ ಇಲ್ಲ, ತಹಶೀಲ್ದಾರ್ ಗಳಿಗೆ ಹಾನಿಯ ಪರಿಹಾರ ವಿತರಿಸುವ ಅಧಿಕಾರ ನೀಡಲಾಗಿದೆ. ಪ್ರವಾಹದಿಂದ ಜನರನ್ನು ಸ್ಥಳಾಂತರಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಲ್ಲ, ಪ್ರವಾಹ ಸಂಭವವಿರುವ 26 ಗ್ರಾಮಗಳನ್ನು ಗುರುತಿಸಲಾಗಿದ್ದು, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳಿಗೆ ಕೇಂದ್ರಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಚಿವರಿಗೆ ತಿಳಿಸಿದರು.

English summary
Home minister and udupi district incharge minsiter Basavaraj bommai conducted video conference with dc jagadish regarding damage caused by rain in district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X