ಭಾರತ ಬಂದ್ : ಉಡುಪಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಹೊಡೆದಾಟ
Recommended Video

ಉಡುಪಿ, ಸೆಪ್ಟೆಂಬರ್ 10 : ಭಾರತ ಬಂದ್ ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಉಡುಪಿ ಬಿಜೆಪಿ ನಗರಾಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ಉಡುಪಿಯಲ್ಲಿ ಸೋಮವಾರ ಭಾರತ ಬಂದ್ ಪ್ರತಿಭಟನೆ ವೇಳೆ ಹೊಡೆದಾಟ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್-ಬಿಜೆಪಿ ಕಾರ್ಯರ್ತರು ಬನ್ನಂಜೆ ಎಸ್ಪಿ ಕಚೇರಿ ಬಳಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

ಬಿಜೆಪಿ ನಗರಾಧ್ಯಕ್ಷ ಪಭಾಕರ ಪೂಜಾರಿ ಮೇಲೆ ಬಾವುಟದ ಕೋಲಿನಿಂದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಪ್ರಭಾಕರ ಪೂಜಾರಿ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಪ್ರಭಾಕರ ಪೂಜಾರಿ ಅವರ ತಲೆ, ಮುಖಕ್ಕೆ ಗಾಯವಾಗಿದೆ. ಉಡುಪಿ ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್ಪಿ ಕಚೇರಿ ಆವರಣದಲ್ಲಿಯೇ ಕಾರ್ಯಕರ್ತರು ಹೊಡೆದಾಟ ಆರಂಭಿಸಿದರು. ಆಗ ಸ್ಥಳಕ್ಕೆ ಆಗಮಿಸಿದ ಎಸ್ಪಿ ಲಕ್ಷ್ಮಣ್ ಬಿ.ನಿಂಬರಗಿ ಅವರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.












Click it and Unblock the Notifications