ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ

Posted By: Ramesh
Subscribe to Oneindia Kannada

ಉಡುಪಿ, ಡಿಸೆಂಬರ್ 28 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣವನ್ನು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮಂಗಳವಾರ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಸ್ತಾಂತರಿಸಿದೆ.

ಇನ್ನು ಮುಂದೆ ಈ ಪ್ರಕರಣದ ಎಲ್ಲಾ ಕಾನೂನು ಪ್ರಕ್ರಿಯೆಗಳು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿವೆ. ಮಂಗಳೂರು ಸಬ್ ಜೈಲಿನಲ್ಲಿದ್ದ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಮಂಗಳವಾರ(ಡಿ.27) ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.[ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣ ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ]

ನ್ಯಾಯಾಧೀಶ ರಾಜೇಶ್ ಕರ್ಣಂ ಅವರು ಈ ಪ್ರಕರಣವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಸ್ತಾಂತರಿಸಿದ ಹಿನ್ನೆಲೆಯಲ್ಲಿ ಮುಂದೆ ನೀಡುವ ನೋಟೀಸ್ ನಂತೆ ಆರೋಪಿಗಳನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

Bhaskar Shetty case moves to Sessions Court

ಸದ್ಯಕ್ಕೆ ಇವರ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದ್ದು. ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಸಾಕ್ಷ್ಯ ನಾಶ ಆರೋಪಿಗಳಾದ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರ ಮುಂದಿನ ವಿಚಾರಣೆಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ.

ಕೊಲೆ, ಅತ್ಯಾಚಾರ ಸಹಿತ ಘೋರ ಅಪರಾಧ ಪ್ರಕರಣಗಳ ವಿಚಾರಣೆ ಪ್ರಕ್ರಿಯೆಗಳು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿಯೇ ನಡೆಯುತ್ತವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The court of the Additional Chief Judicial Magistrate committed the Bhaskar Shetty murder case to the District and Sessions Court for further proceedings and trial here on Tuesday.
Please Wait while comments are loading...