ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ, ನಿರಂಜನ್ ಭಟ್ ಸಿಐಡಿ ವಶಕ್ಕೆ

ಉಡುಪಿ, ಸೆಪ್ಟೆಂಬರ್ 16 : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್‌ನನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಸಿಐಡಿ ಪ್ರಕರಣದ ತನಿಖೆ ಆರಂಭಿಸಿದ ಬಳಿಕ ಮೊದಲ ಬಾರಿಗೆ ಆರೋಪಿಯನ್ನು ವಶಕ್ಕೆ ಪಡೆದಿದೆ.

ಸಿಐಡಿ ಉಡುಪಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಜ್ಯೋತಿಷಿ ನಿರಂಜನ್ ಭಟ್ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಮನವಿ ಪುರಸ್ಕರಿಸಿದ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು 2 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.[ಭಾಸ್ಕರ ಶೆಟ್ಟಿ ಹತ್ಯೆ: ಜ್ಯೋತಿಷಿ ನಿರಂಜನ್ ಭಟ್ ಅನ್ನೋ ಪ್ರಳಯಾಂತಕ]

bhaskar shetty

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್, ಜ್ಯೋತಿಷಿ ನಿರಂಜನ್ ಭಟ್, ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆ.19ರಂದು ಎಲ್ಲರನ್ನೂ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.[ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಹೊಸ ತಿರುವು]

ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಬಳಿಕ ಜ್ಯೋತಿಷಿ ನಿರಂಜನ್ ಶೆಟ್ಟಿ ಅವರ ಮನೆಯ ಹೋಮಕುಂಡದಲ್ಲಿ ಶವವನ್ನು ಸುಡಲಾಗಿದೆ ಎಂಬ ಆರೋಪವಿದೆ. ಆದ್ದರಿಂದ, ನಿರಂಜನ್ ಭಟ್ ಪ್ರಕರಣದ ಪ್ರಮುಖ ಆರೋಪಿ. ಪೊಲೀಸರ ವಶದಲ್ಲಿದ್ದಾಗಲೇ ಉಂಗುರ ನುಂಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರಂಜನ್ ಯತ್ನಿಸಿದ್ದ.[ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಸಿಐಡಿ ತನಿಖೆಗೆ]

ಹತ್ಯೆ ಪ್ರಕರಣದ ಸಾಕ್ಷಿಗಳನ್ನು ನಾಶ ಮಾಡಲು ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಕಾರು ಚಾಲಕ ರಾಘವೇಂದ್ರ ಸಹಾಯ ಮಾಡಿದ್ದಾರೆ ಎಂಬ ಆರೋಪವೂ ಇದೆ. ಆದ್ದರಿಂದ ಅವರನ್ನೂ ಬಂಧಿಸಲಾಗಿದ್ದು, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+