ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ರಾಜೇಶ್ವರಿ ಶೆಟ್ಟಿಗೆ ಜಾಮೀನು

|
Google Oneindia Kannada News

ಉಡುಪಿ, ಡಿಸೆಂಬರ್ 24; ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿ ಅಪರಾಧಿಯಾಗಿದ್ದು, ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕರ್ನಾಟಕ ಹೈಕೋರ್ಟ್‌ಗೆ ಅಪರಾಧಿ ರಾಜೇಶ್ವರಿ ಶೆಟ್ಟಿ ಅರ್ಜಿ ಸಲ್ಲಿಕೆ ಮಾಡಿದ್ದರು. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆ ರದ್ದುಗೊಳಿಸಬೇಕು ಮತ್ತು ಅಧೀನ ನ್ಯಾಯಾಲಯದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದರು.

ಭಾಸ್ಕರ್ ಶೆಟ್ಟಿ ಹತ್ಯೆ : ಸಿಐಡಿಯಿಂದ ಹೆಚ್ಚುವರಿ ಚಾರ್ಜ್ ಶೀಟ್ಭಾಸ್ಕರ್ ಶೆಟ್ಟಿ ಹತ್ಯೆ : ಸಿಐಡಿಯಿಂದ ಹೆಚ್ಚುವರಿ ಚಾರ್ಜ್ ಶೀಟ್

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ಇ. ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ. ಅಪರಾಧಿ ರಾಜೇಶ್ವರಿ ಶೆಟ್ಟಿ ಪರವಾಗಿ ಹಸ್ಮತ್ ಪಾಷಾ ವಾದ ಮಂಡನೆ ಮಾಡಿದ್ದರು.

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟ

Bhaskar Shetty Murder Case Rajeshwari Shetty Gets Bail

ರಾಜೇಶ್ವರಿ ಶೆಟ್ಟಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಅದನ್ನು ಪರಿಗಣಿಸದೇ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹೋಮ ಕುಂಡದಲ್ಲಿ ಭಾಸ್ಕರ್ ಶೆಟ್ಟಿ ಶವವನ್ನು ಸುಡಲಾಗಿದೆ ಎಂಬ ಆರೋಪವಿದೆ. ಆದರೆ ಶವ ಸಿಕ್ಕಿಲ್ಲ. ಡಿಎನ್‌ಎ ವಿಶ್ಲೇಷಣೆ ಸಹ ಸರಿಯಾಗಿ ನಡೆದಿಲ್ಲ ಎಂದು ವಾದ ಮಂಡಿಸಿದ್ದರು.

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಸಾಕ್ಷಿಗಳ ವಿಚಾರಣೆ ಆರಂಭಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಸಾಕ್ಷಿಗಳ ವಿಚಾರಣೆ ಆರಂಭ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು. ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಾಲಯದ ಮುಂದೆ ವಾದಿಸಿದ್ದರು.

ಮೂವರ ಆರೋಪ ಸಾಬೀತು; ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಭಾಸ್ಕರ್ ಶೆಟ್ಟಿ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ ನವನೀತ್ ಶೆಟ್ಟಿ, ಜ್ಯೋತಿಷಿ ನಿರಂಜನ್ ಭಟ್ ವಿರುದ್ಧದ ಆರೋಪ ಸಾಬೀತಾಗಿತ್ತು. ಉಡುಪಿ ಜಿಲ್ಲಾ ನ್ಯಾಯಾಲಯ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ರಾಜೇಶ್ವರಿ ಶೆಟ್ಟಿ ಉಡುಪಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು, ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2016ರ ಜುಲೈ 28ರಂದು ಭಾಸ್ಕರ್ ಶೆಟ್ಟಿ ನಾಪತ್ತೆಯಾಗಿದ್ದರು. ಜುಲೈ 31ರಂದು ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಭಾಸ್ಕರ್ ಶೆಟ್ಟಿ ಕೊಲೆಯಾಗಿರುವ ಮಾಹಿತಿ ತಿಳಿದು ಬಂದಿತ್ತು. ಆದರೆ ಶವ ಮಾತ್ರ ಸಿಕ್ಕಿರಲಿಲ್ಲ. ಆಗಸ್ಟ್ ತಿಂಗಳಿನಲ್ಲಿ ಮಣಿಪಾಲ ಪೊಲೀಸರು ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್, ನಿರಂಜನ್ ಭಟ್ ತಂದೆಯನ್ನು ಬಂಧಿಸಿದ್ದರು. ಬಳಿಕ ಸರ್ಕಾರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಉಡುಪಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಹತ್ಯೆ ಮಾಡಿ, ಕಾರಿನಲ್ಲಿ ಶವವನ್ನು ತೆಗೆದುಕೊಂಡು ಹೋಗಿ ಜ್ಯೋತಿಷಿ ನಿರಂಜನ್ ಭಟ್ ಮನೆಯಲ್ಲಿ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಆದರೆ ಶವ ಮಾತ್ರ ಪತ್ತೆಯಾಗಿರಲಿಲ್ಲ.

ಭಾಸ್ಕರ್ ಶೆಟ್ಟಿ ಅವರ ಮನೆಯಲ್ಲಿ ದೊರೆತ ರಕ್ತದ ಕಲೆ, ಮೂಳೆಗಳ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳಿಸಲಾಗಿತ್ತು. ವರದಿಗಳ ಆಧಾರದ ಮೇಲೆ 101 ಪುಟಗಳ ಹೆಚ್ಚುವರಿ ಚಾರ್ಜ್‌ ಶೀಟ್ ಸಿದ್ದಪಡಿಸಿ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು.

ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ವರ್ಷ ಪ್ರಕರಣದ ವಿಚಾರಣೆ ಪೂರ್ಣಗೊಂಡು ಶಿಕ್ಷೆ ಪ್ರಕಟವಾಗಿತ್ತು.

Recommended Video

Sports Flashback 2021 Episode 03 | Top 5 best moments | Oneindia Kannada

English summary
Entrepreneur Bhaskar Shetty murder case Rajeshwari Shetty get bail from Karnataka high court. She found guilty and awarded life sentence in the case by Udupi district court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X