ಭಾಸ್ಕರ್ ಶೆಟ್ಟಿ ಕೊಲೆ, ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

Posted By:
Subscribe to Oneindia Kannada

ಉಡುಪಿ, ಆಗಸ್ಟ್ 16 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚಿನ ತನಿಖೆ ಅಗತ್ಯವಿದ್ದರೆ ಪುನಃ ಪೊಲೀಸರ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ.

ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್, ಜ್ಯೋತಿಷಿ ನಿರಂಜನ್ ಭಟ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಂಗಳವಾರ ಉಡುಪಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಎಲ್ಲಾ ಆರೋಪಿಗಳನ್ನು ಆಗಸ್ಟ್ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತು.[ಭಾಸ್ಕರ್ ಶೆಟ್ಟಿ ಹತ್ಯೆ, 2 ಕೋಟಿ ಹಣ ವರ್ಗಾವಣೆ ಬಗ್ಗೆ ತನಿಖೆ]

Bhaskar Shetty murder judicial custody for three accused

ನವನೀತ್ ಮತ್ತು ನಿರಂಜನ್ ಅವರನ್ನು ಹಿರಿಯಡ್ಕ ಜೈಲಿಗೆ ಮತ್ತು ರಾಜೇಶ್ವರಿ ಅವರನ್ನು ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದೆ. ಮುಂದಿನ ತನಿಖೆಯ ನಂತರ ಆರೋಪಿಗಳ ವಿಚಾರಣೆ ಅಗತ್ಯವಿದ್ದರೆ, ಅವರನ್ನು ಪೊಲೀಸರ ವಶಕ್ಕೆ ಪಡೆಯಲಾಗುತ್ತದೆ.[ಭಾಸ್ಕರ ಶೆಟ್ಟಿ ಶವ ಸುಡಲು 20 ಲೀಟರ್ ಪೆಟ್ರೋಲ್ ಬಳಕೆ!]

ಡಿಎನ್‌ಎ ಪರೀಕ್ಷೆ : ಆರೋಪಿಗಳ ಡಿಎನ್‌ಎ ಪರೀಕ್ಷೆ ನಡೆಸುವ ಕುರಿತು ಆಗಸ್ಟ್ 18ರಂದು ತೀರ್ಮಾನ ಕೈಗೊಳ್ಳಲಾಗುತ್ತದೆ. ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಮತ್ತು ಸಹೋದರ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ.[ಭಾಸ್ಕರ ಶೆಟ್ಟಿ ಹತ್ಯೆ : ತನಿಖೆಯ ಹೊಣೆ ಅಣ್ಣಾಮಲೈ ಹೆಗಲಿಗೆ?]

ನದಿಯಲ್ಲಿ ಸಿಕ್ಕ ಮೂಳೆಗಳನ್ನು ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಮೂಳೆಗಳ ಜೊತೆ ರಕ್ತದ ಮಾದರಿಯ ಡಿಎನ್‌ಎ ಹೊಂದಿಕೆಯಾದರೆ ಅದು ಕೊಲೆ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ.

ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಇದುವರೆಗೂ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಮತ್ತು ಪುತ್ರ ನವನೀತ್‌, ಜ್ಯೋತಿಷಿ ನಿರಂಜನ್ ಭಟ್, ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಲಾಗಿದೆ. ಶ್ರೀನಿವಾಸ ಭಟ್ ಮತ್ತು ರಾಘವೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿ ಆ.24ಕ್ಕೆ ಅಂತ್ಯಗೊಳ್ಳಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The three main accused in the Bhaskar Shetty murder case Rajeshwari, Navaneeth and Niranjan Bhat were produced in the CJAM court, Udupi on Tuesday, August 16, 2016. All of them have been sent to judicial custody till August 24.
Please Wait while comments are loading...