• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿ ಕ್ವಾರಂಟೈನ್ ಕೇಂದ್ರದಲ್ಲೇ ಬರ್ತ್ ಡೇ ಪಾರ್ಟಿ!

By ಉಡುಪಿ ಪ್ರತಿನಿಧಿ
|

ಉಡುಪಿ, ಜೂನ್ 04: ಒಂದು ಕಡೆ ಉಡುಪಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೇ ವೇಳೆ ಇನ್ನೊಂದೆಡೆ ಕ್ವಾರಂಟೈನ್ ಕೇಂದ್ರದಲ್ಲೇ ಸ್ಥಳೀಯ ಜನಪ್ರತಿನಿಧಿಗಳು ಬರ್ತ್ ಡೇ ಪಾರ್ಟಿ ಮಾಡಿದ್ದಾರೆ.

ಮಹಾರಾಷ್ಟ್ರದಿಂದ ಬಂದ ಅನೇಕರಿಗೆ ಸೋಂಕು ತಗಲುತ್ತಿರುವ ಈ ಹೊತ್ತಿನಲ್ಲಿ, ಅವರು ಕ್ವಾರಂಟೈನ್ ಆಗಿರುವ ಕೇಂದ್ರದಲ್ಲಿ ಹುಟ್ಟು ಹಬ್ಬ ಆಚರಣೆ ನಡೆದಿದ್ದು ಪ್ರಜ್ಞಾವಂತರ ಅಸಮಾಧಾನಕ್ಕೆ ಕಾರಣವಾಗಿದೆ.

ಉಡುಪಿಗೆ ಶಾಕಿಂಗ್ ಸುದ್ದಿ: ಇಂದು 210 ಕೊರೊನಾ ಸೋಂಕು ಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲಮಾದ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದುದು ಗಮನಾರ್ಹ ಸಂಗತಿ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಯೂತ್ ಕಾಂಗ್ರೆಸ್, ಈ ಘಟನೆ ಮತ್ತೆ ಮರುಕಳಿಸಬಾರದು. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಆಗ್ರಹಿಸಿದ್ದಾರೆ.

English summary
Coronavirus cases increasing day by day at udupi. But inbetween this, birthday party arranged at quarantine centre
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X