ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ಪ್ರಚಾರಕ್ಕಾಗಿ ಏ.13 ರಂದು ಮಂಗಳೂರು, ಉಡುಪಿಗೆ ಬರಲಿದ್ದಾರೆ ಮೋದಿ

|
Google Oneindia Kannada News

ಮಂಗಳೂರು, ಏಪ್ರಿಲ್ 02:ಕರಾವಳಿಯಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಚುನಾವಣೆಯ ಕಾವು ಕೂಡ ಹೆಚ್ಚಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪ್ರತಿಷ್ಠೆಗಾಗಿ ಜಿದ್ದಾಜಿದ್ದಿಯ ಹೋರಾಟ ಆರಂಭವಾಗಿದೆ.

ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಬರಲಿದ್ದಾರೆ ಮೋದಿಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಬರಲಿದ್ದಾರೆ ಮೋದಿ

ಇನ್ನು ಮತದಾನಕ್ಕೆ ಕೇವಲ 16 ದಿನ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಪ್ರಚಾರ ಬಿರುಸುಗೊಂಡಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರ ಜೋಷ್ ಒಮ್ಮಿಂದೊಮ್ಮೆ ಹೆಚ್ಚಾಗಿದೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆ ಪ್ರಚಾರಾರ್ಥ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಹಾಗೂ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅದಲ್ಲದೇ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಆಗಮಿಸುತ್ತಿದ್ದಾರೆ.

BJP campaign in Dakshina Kannada, Udupi- Chikkamagaluru constituency

ಮೋದಿ ಏಪ್ರಿಲ್ 13ರಂದು ಮಂಗಳೂರು ಹಾಗೂ ಉಡುಪಿಗೆ ಆಗಮಿಸುತ್ತಿರುವುದು ಖಚಿತವಾಗಿದೆ. ಚಿಕ್ಕಮಗಳೂರಿಗೆ ಏಪ್ರಿಲ್ 15ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ.

 ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ! ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ!

ಏಪ್ರಿಲ್ 13 ರಂದು ಮಧ್ಯಾಹ್ನ ಮೋದಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದರಂತೆ ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಆದರೆ ಸಮಯವಿನ್ನೂ ನಿರ್ಧಾರವಾಗಿಲ್ಲ.

 ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿ

ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್‌, ಸ್ಮತಿ ಇರಾನಿ, ಪ್ರಕಾಶ್‌ ಜಾವ್ಡೇಕರ್ ಮೊದಲಾದ ಆರೇಳು ಮಂದಿ ರಾಷ್ಟ್ರೀಯ ಮಟ್ಟದ ಪ್ರಚಾರಕರು ಈ ಬಾರಿ ಚುನಾವಣಾ ಪ್ರಚಾರಕ್ಕೆ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ.

English summary
BJP started campaign in Dakshina Kannada Lok sabha constituency. PM Narendra Modi going to visit Mangaluru and Udupi on April 13th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X