ಇಬ್ಬರು ಅಭ್ಯರ್ಥಿಗಳು ಗೆಲುವಿಗಾಗಿ ಒಂದೇ ದೈವದ ಆಶೀರ್ವಾದ ಪಡೆದ್ರು!
ಉಡುಪಿ, ಏಪ್ರಿಲ್ 22 : ಚುನಾವಣೆ ಬಂದ್ರೆ ರಾಜಕಾರಣಿಗಳು ಗೆಲುವಿಗಾಗಿ ಮತದಾರ ಮನೆ ಮನೆ ಬಾಗಿಲಿಗೆ ಅಲೆದಾಡುವುದು ಸಹಜ. ತನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ , ಮಸೀದಿ ಚರ್ಚ್ ಗಳ ಭೇಟಿ ಮಾಡುವುದು ಈ ಕಾಲದ ರಾಜಕಾರಣದಲ್ಲಿ ಹೊಸತೇನೂ ಅಲ್ಲ ಬಿಡಿ. ಆದ್ರೆ ಕಾಪು ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೋರಕೆ ಇಬ್ಬರು ಗೆಲುವಿಗಾಗಿ ಒಂದೇ ದೈವದ ಮೊರೆ ಹೋಗಿರುವುದು ವಿಶೇಷ.
ಕಳೆದ ಬಾರಿ ಚುನಾವಣೆಯಲ್ಲಿ ಮಾಜಿ ಶಾಸಕ , ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರನ್ನು ವಿನಯ್ ಕುಮಾರ್ ಸೊರಕೆ ಸೋಲಿಸಿದ್ರು. ಈ ಬಾರಿಯೂ ಆ ಎರಡು ಅಭ್ಯರ್ಥಿಗಳೇ ಕಣದಲ್ಲಿ ಇದ್ದಾರೆ. ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿಗಳು ನಾಯಕರು ಪ್ರಚಾರ ಶುರು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರ ಈ ಸಾರಿ ಉಡುಪಿ ಜಿಲ್ಲೆಯ ಪೈಕಿ ಜಿದ್ದಿನ ಕಣ. ಕಾಂಗ್ರೆಸ್ ನಿಂದ ವಿನಯಕುಮಾರ್ ಸೊರಕೆ, ಬಿಜೆಪಿಯಿಂದ ಲಾಲಾಜಿ ಮೆಂಡನ್ ಕಣದಲ್ಲಿದ್ದಾರೆ.
ಈ ಬಾರಿ ಇಬ್ಬರಿಗೂ ನೆಕ್ ಟೂ ನೆಕ್ ಫೈಟ್ ಇದೆ. ಇಬ್ಬರೂ ನಾಯಕರು ಒಂದೇ ದೈವದ ಮೊರೆ ಹೋಗಿದ್ದು, ಆಶೀರ್ವಾದ ಮಾಡಿ ಅಂತ ಶಿರ್ವ ಗ್ರಾಮದ ಸೊರ್ಪು ಶ್ರೀ ಬ್ರಹ್ಮ ಮುಗೇರ್ಕಳ ದೈವಸ್ಥಾನದಲ್ಲಿ ಬೇಡಿಕೊಂಡಿದ್ದಾರೆ. ಅಲೇರ ಪಂಜುರ್ಲಿ ದೈವ ಸೊರಕೆ ಮತ್ತು ಲಾಲಾಜಿ ಇಬ್ಬರಿಗೂ ಒಳ್ಳೆಯದಾಗುತ್ತದೆ. ನಿಮ್ಮ ಬೆನ್ನ ಹಿಂದೆ ನಾನಿದ್ದೇನೆ. ಸತ್ಯ, ಧರ್ಮ ನ್ಯಾಯವಿದ್ದಲ್ಲಿ ಗೆಲುವು ಇದೆ ಎಂದು ನುಡಿ ಕೊಟ್ಟಿದೆ.

ಹೀಗಾಗಿ ಇಬ್ಬರೂ ನಾಯಕರೂ ಪ್ರಸಾದ ಸ್ವೀಕರಿಸಿ, ಅಲ್ಲಿಂದ ತೆರಳಿದ್ದಾರೆ. ದೇವರ ಬಳಿ ಹೋದ ಎಲ್ಲರಿಗೂ ಒಳ್ಳೆದಾಗಲಿ ಎಂಬ ಆಶೀರ್ವಾದ ಸಿಗುತ್ತದೆ. ಆದ್ರೆ ಮೇ 12 ರಂದು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದರ ಮೇಲೆ ಇಬ್ಬರು ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ ಅಲ್ಲವೇ?
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications