Pratap Simha: ಹಿಂದುತ್ವವಾದಿಗಳಿಗೆ ಇಂತಹ ಪರಿಸ್ಥಿತಿ ದುರದೃಷ್ಟಕರ: ರಘುಪತಿ ಭಟ್ ಪರ ಪ್ರತಾಪ್ ಸಿಂಹ ಬ್ಯಾಟಿಂಗ್
ಉಡುಪಿ, ಜೂನ್ 03: ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಳಿದ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.
ಪಕ್ಷದಿಂದ ಉಚ್ಚಾಟನೆಗೊಂಡ ರಘುಪತಿ ಭಟ್ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್ ನೀಡಿರುವ ಬಗ್ಗೆ ವರದಿಯಾಗಿತ್ತು. ಈ ಎಲ್ಲಾ ಬೆಳವಣಿಗೆಳನ್ನು ಗಮನಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, 'ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಪೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ' ಎಂದಿದ್ದಾರೆ.
ಪ್ರತಾಪ್ ಸಿಂಹ ಅವರ ಬೆಂಬಲಕ್ಕೆ ಧನ್ಯವಾದ ತಿಳಿಸಿರುವ ರಘುಪತಿ ಭಟ್ 'ಪ್ರತಾಪ್ ಸಿಂಹ ಅವರಿಗೆ ವಂದನೆಗಳು. ನಿಜವಾದ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತು ಹಿಂದುತ್ವವಾದಿಗಳಿಗೆ ನನ್ನ ನಿಲುವು ಏನೆಂದು ಸ್ಪಷ್ಟವಾಗಿ ತಿಳಿದೆ. ಪರಿವಾರದ ಮನಸ್ಥಿತಿಯ ನಿಷ್ಠಾವಂತ ಕಾರ್ಯಕರ್ತರು ಎಂದಿಗೂ ನನ್ನ ಜೊತೆ ಇದ್ದಾರೆ. ನನ್ನ ಉಸಿರು ಇರುವವರೆಗೆ ಅವರ ಧ್ವನಿಯಾಗಿ ಇರುತ್ತೇನೆ' ಎಂದಿದ್ದಾರೆ.
ರಘುಪತಿ ಭಟ್‌ಗೆ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್ ಏನು..?
ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆಗೊಳ್ಳುತ್ತಿದ್ದಂತೆ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಲಾಗಿದ್ದು, ಮಾಜಿ ಶಾಸಕರಿಗೆ ಆಲಿಯಾ ಅಸ್ಸಾದಿ ಕೌಂಟರ್ ನೀಡಿದ್ದಾಳೆ ಎನ್ನಲಾಗಿತ್ತು.
' ಅಂದು ಹಿಜಾಬ್ ಕಾರಣಕ್ಕಾಗಿ ನನ್ನನ್ನು ನೀವು ಕಾಲೇಜಿನಿಂದ ಹೊರದಬ್ಬಿದಿರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದಿರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಛಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಛಾಟಿತ ವ್ಯಕ್ತಿ' ಎಂದು ಲೇವಡಿ ಮಾಡಿದ್ದಾರೆ ಎನ್ನಲಾಗಿತ್ತು.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications