ರೈಲು ಡಿಕ್ಕಿಯಾಗಿ ಅಪರೂಪದ ಕರಿಚಿರತೆ ಸಾವು

ಉಡುಪಿ, ಫೆಬ್ರವರಿ 3: ಉಡುಪಿ ಜಿಲ್ಲೆಯಲ್ಲಿ ರೈಲು ಡಿಕ್ಕಿಯಾಗಿ ಅಪರೂಪದ ವನ್ಯಜೀವಿ ಕರಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ಸಂಭವಿಸಿದೆ.

ಈ ಚಿರತೆಯು ಅಂದಾಜು ಮೂರ್ನಾಲ್ಕು ವರ್ಷ ಪ್ರಾಯದ್ದಾಗಿದ್ದು, ಈ ಗಂಡು ಚಿರತೆಯು ಆಹಾರ ಅರಸಿಕೊಂಡು ನಾಡಿಗೆ ಬಂದಿದ್ದು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕೂಡಲೇ ಸ್ಥಳೀಯರು ಮೃತದೇಹವನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಮೃತದೇಹವನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Udupi: Black Panther Dies After Being Hit By Train Near Kundapura

ಉಡುಪಿ ಜಿಲ್ಲೆ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಅರಣ್ಯ ಪ್ರದೇಶ ಇದ್ದು, ಕರಿ ಚಿರತೆ ಅಲ್ಲಿಂದ ಆಹಾರಕ್ಕಾಗಿ ರೈಲ್ವೆ ಮೇಲ್ಸೇತುವೆ ಬಳಿ ಬಂದಿತ್ತು ಎನ್ನಲಾಗಿದೆ.

Recommended Video

      ಅಸಮಾಧಾನ ಶಮನಕ್ಕೆ ಸಿಎಂ ಬಿಎಸ್‌ವೈ ಭೋಜನಕೂಟ, ಹಲವರು ಶಾಸಕರು ಗೈರು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+