ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿದ್ದಾರೆ ಬಿ.ಆರ್.ಶೆಟ್ಟಿ

|
Google Oneindia Kannada News

ಉಡುಪಿ, ಆಗಸ್ಟ್ 25 : ಮಂಗಳೂರು ಮೂಲದ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಉಡುಪಿಯಲ್ಲಿ 400 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಿದ್ದಾರೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಸುಮಾರು 200 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಿ ಜಮೀನು ನೀಡಲು ಒಪ್ಪಿಗೆ ನೀಡಲಾಗಿದೆ. 30 ವರ್ಷಗಳ ಅವಧಿಗೆ ಜಮೀನನ್ನು ಗುತ್ತಿಗೆಗೆ ನೀಡಲಾಗುತ್ತದೆ.[ವರ್ಷಪೂರ್ತಿ ಜೋಗ ವೈಭವ : ಏನಿದು ಯೋಜನೆ?]

BR Shetty to set up super-speciality hospital in Udupi

ಉಡುಪಿ ಜಿಲ್ಲೆಯ ಮೂಡನಿಡಂಬೂರು ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಮೂರು ನಿವೇಶನಗಳ ಸರ್ಕಾರಿ ಭೂಮಿಯಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ. ಜಮೀನನ್ನು 60 ವರ್ಷಗಳ ಅವಧಿಗೆ ನೀಡುವಂತೆ ಬಿ.ಆರ್.ಶೆಟ್ಟಿ ಅವರು ಕೋರಿದ್ದರು. ಆದರೆ, 30 ವರ್ಷಗಳ ಅವಧಿಗೆ ನೀಡಲು ಒಪ್ಪಿಗೆ ಸಿಕ್ಕಿದೆ.[ಕನ್ನಡಿಗ ಬಿಆರ್ ಶೆಟ್ಟಿ ತೆಕ್ಕೆಗೆ ಟ್ರಾವೆಲ್ ಎಕ್ಸ್]

ಬಿ.ಆರ್.ಶೆಟ್ಟಿ ಅವರು ತಮ್ಮ ತಾಯಿ ಹೆಸರಿನಲ್ಲಿ 400 ಹಾಸಿಗೆಗಳ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದ್ದಾರೆ. ಸುಮಾರು 200 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ.[ದುಬೈ: ಕೇರಳದ ಎನ್ನಾರೈ ನಂ.1, ಡಾ. ಶೆಟ್ಟಿ ನಂ.4]

ಈ ಸ್ಥಳಕ್ಕೆ ಹೊಂದಿಕೊಂಡಂತೆ ಸರ್ಕಾರಿ ಆಸ್ಪತ್ರೆಯಿದೆ. ಆದರೆ, ಅದು ಸುಸ್ಥಿತಿಯಲ್ಲಿಲ್ಲ. ಆದ್ದರಿಂದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

English summary
Noted NRI entrepreneur B.R Shetty will be setting up a 400 bed super speciality hospital in Udupi, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X