• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿಕ್ಷಕರಿಂದ ಮಾನಸಿಕ ಕಿರುಕುಳ ಆರೋಪಿಸಿ ಉಡುಪಿ ವಿದ್ಯಾರ್ಥಿ ಆತ್ಮಹತ್ಯೆ

By ಉಡುಪಿ ಪ್ರತಿನಿಧಿ
|

ಉಡುಪಿ, ಮಾರ್ಚ್ 5: ಶಿಕ್ಷಕರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬ್ರಹ್ಮಾವರ ಮಂದಾರ್ತಿಯ ಮೈರ್ಕೋಮೆ ನಿವಾಸಿ ಚರಣ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಚರಣ್ ಹೆಬ್ರಿ ಕಾಲೇಜಿನಲ್ಲಿ ಪ್ರಥಮ‌ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ.

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ತಾಯಿ, ಮಗ

ಕಾಲೇಜ್ ಡೇ ದಿನ ಶಿಕ್ಷಕರಿಂದ ಮಾನಸಿಕ ಕಿರುಕುಳ ಆಗಿತ್ತು. ಪೋಷಕರ ಸಭೆಯಲ್ಲೂ ಶಿಕ್ಷಕರು ಅವಮಾನ ಮಾಡಿದ್ದರು, ತರಗತಿಯಿಂದ ಹೊರ ನೂಕಿದ್ದರು. ಜೊತೆಗೆ ಸರ್ಕಾರ ನೀಡಿದ್ದ ಲ್ಯಾಪ್‌ಟಾಪ್ ನೀಡದೆ ಅವಮಾನ ಮಾಡಿದ್ದರು. ಶಿಕ್ಷಕರಿಂದ ನಿರಂತರ ಮಾನಸಿಕ ಕಿರುಕುಳ ಆಗುತ್ತಿದೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಮೊದಲು ಗೆಳೆಯನಿಗೆ ವಿಡಿಯೋ ಕಾಲ್ ಮಾಡಿ ವಿಷಯ ತಿಳಿಸಿ ಮನೆಯ ಸಮೀಪದ ಹಾಡಿಯಲ್ಲಿರುವ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A Hebri government college student committed suicide alleging teachers harrasment,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X