'ಬಿಎಸ್ ವೈ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ತೀರ್ಮಾನವಾಗಿಲ್ಲ'
Recommended Video

ಉಡುಪಿ, ಸೆಪ್ಟೆಂಬರ್ 18 : ಚುನಾವಣೆಯ ಬಿ.ಎಸ್.ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.
ಸೋಮವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅವರಿಗೆ ಪ್ರೀತಿಯ ಹಾಗೂ ಸ್ವಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆಯನ್ನು ಬಿಟ್ಟು ಹೋಗಲು ಮನಸ್ಸಿಲ್ಲ. ಸ್ಪರ್ಧೆಯ ಕುರಿತು ಅವರು ಇನ್ನೂ ಕೂಡ ದ್ವಂದ್ವದಲ್ಲಿ ಇದ್ದು, ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಬಹುಮತದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ತನ್ನ ಕ್ಷೇತ್ರವನ್ನು ಬದಲು ಮಾಡುವ ಅನಿವಾರ್ಯ ಎದುರಾಗಿದೆ. ವರುಣಾ ಕ್ಷೇತ್ರ ಈಗಾಗಲೇ ಸಿದ್ದರಾಮಯ್ಯ ಅವರ ಕೈತಪ್ಪಿ ಹೋಗಿದೆ. ಅವರು ಎಲ್ಲೇ ಸ್ಪರ್ಧಿಸಿದರೂ ಸೋಲು ಖಚಿತ ಎಂದು ಭವಿಷ್ಯ ನುಡಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಪ್ಪ ಚರ್ಮದ ರಾಜ್ಯ ಸರಕಾರಕ್ಕೆ ಯಾರ ಕೂಗು ಕೂಡ ಕೇಳಿಸುತ್ತಿಲ್ಲ. ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಛೀಮಾರಿ ಹಾಕಿದೆ.
ಈ ಪ್ರಕರಣದ ಸಾಕ್ಷ್ಯಗಳನ್ನು ರಾಜ್ಯ ಸರಕಾರ ಸಿಐಡಿ ಅಧಿಕಾರಿಗಳ ಮೂಲಕ ಮುಚ್ಚಿ ಹಾಕಿದೆ. ಎಲ್ಲಾ ಕಡತಗಳನ್ನು ತೆಗೆದುಹಾಕಲಾಗಿದೆ.
ಸಿಐಡಿ ಅಧಿಕಾರಿಗಳು ಗಣಪತಿ ಕುಟುಂಬದವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಇದರ ಹಿಂದೆ ಮುಖ್ಯಮಂತ್ರಿ ಹಾಗೂ ಸಚಿವ ಜಾರ್ಜ್ ಇರೋದು ಸ್ಪಷ್ಟವಾಗಿದೆ ಎಂದು ಹೇಳಿದರು.












Click it and Unblock the Notifications