ಉಡುಪಿಯಲ್ಲಿ ನಾಳೆಯಿಂದ ಬಸ್ ಸಂಚಾರ ಪ್ರಾರಂಭ: ಜಿಲ್ಲಾಧಿಕಾರಿ

ಉಡುಪಿ, ಮೇ 12: ಉಡುಪಿ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಜನತಾ ಕರ್ಫ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ. ಇದೀಗ ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದರು.

ಮೇ 13 ರ ಬೆಳಿಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್ ಗಳು ಕಾರ್ಯಾಚರಣೆ ಆರಂಭಿಸಲಿವೆ. ಒಂದು ಬಸ್ ನಲ್ಲಿ ಶೇ.50 ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸದ ಪ್ರಯಾಣಿಕರನ್ನು ಬಸ್ ಒಳಗೆ ಬಿಟ್ಟುಕೊಳ್ಳಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಬಸ್ ನಿರ್ವಾಹಕರಿಗೆ ಹಾಗೂ ಚಾಲಕರಿಗೆ ಸೂಚನೆ ನೀಡಿದ್ದಾರೆ.

Bus Service To Be Start From Tomorrow In Udupi

ಮಾಸ್ಕ್ ತಲೆಗೆ ಹಾಕಿಕೊಳ್ಳುವುದು, ಕುತ್ತಿಗೆಗೆ ನೇತಾಡಿಸುವುದು ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕೆಎಸ್ಆರ್ಟಿಸಿಯ ಅಧಿಕಾರಿಗಳು ರೂಟ್ ಸರ್ವೇ ಮುಗಿಸಿದ್ದು, ಅಗತ್ಯ ಇರುವ ರಸ್ತೆಗಳಲ್ಲಿ ಬಸ್ ಗಳನ್ನು ಓಡಿಸಲಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+