ನನ್ನ ಸ್ಪರ್ಧೆಯಿಂದ ಸಿ.ಟಿ ರವಿಗೆ ನ್ಯಾಯ ಸಿಕ್ಕಿದೆ- ಮಾಜಿ ಶಾಸಕ ರಘುಪತಿ ಭಟ್
ಉಡುಪಿ, ಜೂನ್ 08: ವಿಧಾನ ಪರಿಷತ್ ಚುನಾವಣೆ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಸೋಲು ಕಂಡಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತಗಳು. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳು ಮತ್ತು ಕೆ. ರಘುಪತಿ ಭಟ್ 7039 ಮತಗಳನ್ನು ಪಡೆದಿದ್ದಾರೆ.
ಸೋಲಿನ ಬಳಿಕ ಮಾಜಿ ಶಾಸಕ ರಘುಪತಿ ಭಟ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ನನ್ನ ಸ್ಪರ್ಧೆಯಿಂದ ಸಿ.ಟಿ ರವಿಗೆ ನ್ಯಾಯ ಸಿಕ್ಕಿದೆ. ಹಿಂದುತ್ವ, ರಾಷ್ಟ್ರೀಯತೆಗೆ ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದೆ. ತಪ್ಪು ನಿರ್ಧಾರಗಳ ಬಗ್ಗೆ ಪಕ್ಷ ಎಚ್ಚೆತ್ತುಕೊಳ್ಳಬೇಕು ಎಂದು ನನ್ನ ಅಭಿಲಾಷೆ ಇತ್ತು ಎಂದರು.

ಸಾಮಾನ್ಯ ಕಾರ್ಯಕರ್ತರು ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಇನ್ನು ಕನಸು. ಅವಕಾಶ ವಂಚಿತರಿಗೆ ಈ ಹಿಂದೆ ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಅವಕಾಶ ಸಿಗುತ್ತಿತ್ತು. ಇದು ರಾಜಕೀಯ ಕ್ಷೇತ್ರದಲ್ಲಿ ಅತ್ಯಂತ ಬೇಸರದ ವಿಷಯ. ಈ ಚುನಾವಣೆಯಲ್ಲಿ ನನಗೆ ಸಮಯದ ಕೊರತೆ ಆಯ್ತು. ನೋಂದಣಿ ದೊಡ್ಡ ಸಮಸ್ಯೆ ಇದರಿಂದ ಕೊರತೆ ಆಯ್ತು ಎಂದರು.
ಗೆಲ್ಲುವ ವಿಶ್ವಾಸದಲ್ಲೇ ನಾನು ಸ್ಪರ್ಧಿಸಿದ್ದು. ಅನೇಕ ನಾಯಕರು ನನ್ನ ಸಾತ್ವಿಕ ಹೋರಾಟವನ್ನು ಬೆಂಬಲಿಸಿದರು. ಈ ಮಟ್ಟದ ಸೋಲು ನನಗೆ ಅನಿರೀಕ್ಷಿತ. ಆದರೆ ಇದು ಮತದಾರರ ನಿರ್ಣಯ ಸ್ವೀಕರಿಸಬೇಕು. ಐದು ಜಿಲ್ಲೆಗೂ ಪ್ರವಾಸ ಮಾಡಿ ಅಭಿನಂದಿಸುವೆ. ಸೋಲಿನಿಂದ ನಾನು ಓಡಿ ಹೋಗುವುದಿಲ್ಲ. ರಾಜಕೀಯ, ಸಾಮಾಜಿಕ ಕಾರ್ಯಕರ್ತನಾಗಿ ಇರುತ್ತೇನೆ. ಕಾರ್ಯಕರ್ತರ ಧ್ವನಿಯಾಗಿ ಇರುತ್ತೇನೆ ಎಂದು ಹೇಳಿದರು.
ಸದ್ಯ ಪಕ್ಷವನ್ನು ಎದುರು ಹಾಕಿಕೊಂಡು ನಿಂತಿದ್ದೇನೆ. ನನ್ನ ಜೊತೆ ಬಂದವರ ಪರ ಇರೋದು ನನ್ನ ಜವಾಬ್ದಾರಿ. ಪಕ್ಷದ ತಪ್ಪು ನಿರ್ಧಾರಕ್ಕೆ ಸ್ಪಷ್ಟ ಸಂದೇಶ ಕಳುಹಿಸುವುದು ಉದ್ದೇಶವಾಗಿತ್ತು ಅದರಲ್ಲಿ ಯಶಸ್ವಿಯಾಗಿದ್ದೇವೆ. ಆರ್ ಎಸ್ ಎಸ್ ನೇರವಾಗಿ ಫೀಲ್ಡ್‌ಗೆ ಇಳಿದು ಕೆಲಸ ಮಾಡುವಂತಾಯ್ತು. ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಬರುವಂತಾಯಿತು. ಎಚ್ಚರಿಸುವ ಕೆಲಸ ಆಗಬೇಕಿತ್ತು ಅದನ್ನು ಮಾಡಿದ್ದೇನೆ. ಸಾಮಾಜಿಕ ರಾಜಕೀಯ ಜೀವನದಿಂದ ಹಿಂದೆ ಸರಿಯುವುದಿಲ್ಲ ಎಂದರು.
ನನ್ನ ಮನೆ ಸದಾನೊಂದವರಿಗೆ, ಸಮಸ್ಯೆ ಇರುವವರಿಗೆ ತೆರೆದಿರುತ್ತದೆ. ನಾನು ಬಿಜೆಪಿಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ. ರಾಷ್ಟ್ರೀಯತೆ ವಿಚಾರದಲ್ಲಿ ಗಟ್ಟಿಯಾಗಿ ನಿಲ್ಲುತ್ತೇನೆ. ಬಿಜೆಪಿ ಲೋಕಸಭೆಗಿಂತಲೂ ಗಂಭೀರವಾಗಿ ಸವಾಲಾಗಿ ಚುನಾವಣೆ ನಡೆಸಿತು. ಇದೇ ಮೊದಲ ಬಾರಿಗೆ ಕ್ಷೇತ್ರದಾದ್ಯಂತ ಹಣ ಹಂಚುವ ಕೆಲಸವಾಗಿದೆ. ಚುನಾವಣೆ ಮುಗಿದ ನಂತರ ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications