ದನದ ವ್ಯಾಪಾರಿ ಹುಸೈನಬ್ಬ ಕೊಲೆ ಪ್ರಕರಣ ಸಿಐಡಿಗೆ

ಉಡುಪಿ, ಜೂನ್ 15: ಪೆರ್ಡೂರು ಗ್ರಾಮದ ಶೇನರಬೆಟ್ಟು ಎಂಬಲ್ಲಿ ಮೇ 29ರಂದು ಕೊಲೆಯಾಗಿದ್ದ ಮಂಗಳೂರಿನ ಜೋಕಟ್ಟೆ ನಿವಾಸಿ 62 ವರ್ಷದ ಹುಸೈನಬ್ಬ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.

ಕಳೆದ 35 ವರ್ಷಗಳಿಂದ ಗೋ ಮಾರಾಟ ಮತ್ತು ಸಾಗಾಣಿಕೆ ವ್ಯವಹಾರ ಮಾಡುತ್ತಿದ್ದ, ಹುಸೈನಬ್ಬರನ್ನು ಮೇ 29 ರಂದು ಬಜರಂಗದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮಾಡಿ ಕೊಲೆ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐ ಸಹಿತಿ ಮೂವರು ಪೊಲೀಸರು ಮತ್ತು 7 ಜನ ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಕಾರವಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Cattle trader Hussainabba murder case to CID

ಪೊಲೀಸ್ ಕಸ್ಟಡಿಯಲ್ಲಿ ಹಸನಬ್ಬ ಸಾವನ್ನಪ್ಪಿದ್ದಾರೆ ಎಂದು ಅವರ ಸಹೋದರ ದೂರು ನೀಡಿದ್ದರು. ಒಂದೊಮ್ಮೆ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಮೃತಪಟ್ಟರೆ ಅಂಥಹ ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು. ಹೀಗಾಗಿ ಇದೀಗ ಕೊಲೆ ನಡೆದು 14 ದಿನಗಳ ಬಳಿಕ ಜೂನ್ 14ರಂದು ಪ್ರಕರಣವನ್ನು ಸಿಐಡಿಗೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+