ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ಉಡುಪಿ ಕಾಂಗ್ರೆಸ್ ನಿಂದ ರಸ್ತೆ ತಡೆ, ಪ್ರತಿಭಟನೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಅಕ್ಟೋಬರ್ 6: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದ್ದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆದಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡುವಿನ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಕನಕಪುರದಲ್ಲಿ ಪ್ರತಿಭಟನೆಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಕನಕಪುರದಲ್ಲಿ ಪ್ರತಿಭಟನೆ

ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಇದು ಖಂಡನೀಯ. ಪದೇ ಪದೇ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡರ ಧೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ, ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ಹರಿಹಾಯ್ದರು.

CBI Raids On DK Shivakumar Premises, Udupi District Congress Workers Protest By Blocking Road

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ನಾವೆಲ್ಲ ಇದ್ದೇವೆ, ಡಿ.ಕೆ ಶಿವಕುಮಾರ್ ಅವರು ಯಾವತ್ತಿದ್ದರೂ ಬಂಡೆಯೇ. ಅವರ ಅಷ್ಟೂ ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅವರಿಗೆ ಸಿಕ್ಕಿದ್ದು ಕೇವಲ 57 ಲಕ್ಷ ರುಪಾಯಿ ಮಾತ್ರ ಎಂದರು.

CBI Raids On DK Shivakumar Premises, Udupi District Congress Workers Protest By Blocking Road

Recommended Video

Muttappa Rai ಪುತ್ರ Ricky Rai ಮನೆ ಮೇಲೆ CCB ದಾಳಿ | Oneindia kannada

ಅದೇ ಬಿಜೆಪಿ ಪಕ್ಷದ ಶಾಸಕರು ಮತ್ತು ಮಂತ್ರಿಗಳ ಮನೆ ಮೇಲೆ ದಾಳಿ ನಡೆಸಿದರೆ ಕೋಟ್ಯಂತರ ರೂ. ಸಿಗುತ್ತದೆ. ತಾಕತ್ತಿದ್ದರೆ ಆ ಕೆಲಸ ಮಾಡಿ ಎಂದು ಉಡುಪಿ ಕಾಂಗ್ರೆಸ್ ಮುಖಂಡರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು. ಅರ್ಧ ತಾಸು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದರು.

English summary
The Udupi District Congress held a massive protest and road block today, condemning the CBI attack on the homes and offices of KPCC President DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X